LATEST NEWS
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಇಂದು ಮತ್ತು ನಾಳೆ ಶಾಲೆಗಳಿಗೆ ರಜೆ

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಇಂದು ಮತ್ತು ನಾಳೆ ಶಾಲೆಗಳಿಗೆ ರಜೆ
ಮಂಗಳೂರು ಜೂನ್ 8: ಕರಾವಳಿಯಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಿನ್ನಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲೆಗಳಿಗೆ ಇಂದು ಮತ್ತು ನಾಳೆ ರಜೆ ಘೋಷಿಸಲಾಗಿದೆ.
ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು ನಿನ್ನೆಯಿಂದ ಜಿಲ್ಲೆಯ ಹಲವೆಡೆ ಭಾರಿ ಮಳೆ ಸುರಿಯುತ್ತಿದೆ. ಸುಳ್ಯ,ಪುತ್ತೂರು, ಬೆಳ್ತಂಗಡಿ ತಾಲೂಕಿನಲ್ಲಿ ಜಡಿ ಮಳೆ ಸುರಿಯುತ್ತಿದ್ದು, ನಿನ್ನೆ ಸಂಜೆಯಿಂದ ನಿರಂತರ ವಾಗಿ ಮಳೆ ಸುರಿಯುತ್ತಿದೆ. ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಿಲ್ಲೆಯ ಪ್ರಮುಖ ನದಿಗಳು ತುಂಬಿ ಹರಿಯುತ್ತಿದೆ.

ಈ ನಡುವೆ ಹವಾಮಾನ ಇಲಾಖೆ ಜೂನ್ 10 ರವರೆಗೆ ಕರಾವಳಿಯಲ್ಲಿ ಭಾರಿ ಮಳೆ ಸುರಿಯುವ ಮುನ್ಸೂಚನೆ ನೀಡಿದೆ. ಅಲ್ಲದೆ ಕರಾವಳಿಯಲ್ಲಿ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆ ಮುಂಜಾಗ್ರತೆಗಾಗಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ಇಂದು ಮತ್ತು ನಾಳೆ ರಜೆ ಘೋಷಿಸಿದ್ದಾರೆ.