ಆನೇಕ ಕಡೆ ಭೂಕುಸಿತಗಳು ಉಂಟಾಗಿದ್ದು ಕಾರವಾರ – ಶಿವಮೊಗ್ಗ -ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ. ಹೊನ್ನಾರ ತಾಲೂಕಿನ ವರ್ನಕೇರಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಒಮ್ಮಿಂದ ಒಮ್ಮೆಲೆ ಗುಡ್ಡ ಕುಸಿತ ಗೊಂಡು ಹೆದ್ದಾರಿ ಮೇಲೆ ಬಿದ್ದಿದೆ. ಇದರಿಂದಾಗಿ ದೊಡ್ಡ ಮರ ಹಾಗೂ ಮಣ್ಣು ರಸ್ತೆಗೆ ಬಿದ್ದಿದೆ. ಇನ್ನು ಬಿದ್ದ ಮರ ಹಾಗೂ ಮಣ್ಣನ್ನು ತೆಗೆಯಲು ತೊಂದರೆಯಾಗಿದ್ದು ಕಾರ್ಯಾಚರಣೆ ಸಹ ತಡವಾಗುತಿದ್ದು ಸದ್ಯ ಈ ಭಾಗದಲ್ಲಿ ಸಂಚಾರ ಸಂಪೂರ್ಣ ಬಂದ್ ಆಗಿದೆ.ಹೊನ್ನಾವಾರ ತಾಲೂಕಿನ ಐದು ಗ್ರಾಮಗಳ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಜನತಾ ವಿದ್ಯಾಲಯ ಅನಿಲಗೋಡ್ ,ಹಿರಿಯ ಪ್ರಾಥಮಿಕ ಶಾಲೆ ಅನಿಲಗೋಡ,ಗುಂಡ ಬಾಳ ನಂ-2,ಗುಂಡಿ ಬೈಲ್ ನಂ 2,ಹುಡ್ಗೋಡ ಇಟ್ಟಿಹಾದ ಪಬ್ಲಿಕ್ ಸ್ಕೂಲ್ , ಕಿರಿಯ ಪ್ರಾಥಮಿಕ ಶಾಲೆ ಗಂಜಿಗೆರೆ ಈ ಶಾಲೆಗಳಿಗೆ ರಜೆ ಘೋಷಿಸಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಆದೇಶ ಮಾಡಿದ್ದಾರೆ.
ನದಿ ನೀರು ಸಹಜ ಮಟ್ಟಕ್ಕಿಂತ ಮೇಲೆ ಬರುತ್ತಿದ್ದು ನದಿ ಪಾತ್ರದ ಮನೆಗಳಿಗೆ ನೀರು ನುಗ್ಗುವ ಸಾಧ್ಯತೆ ಇದೆ. ಕಾರಣ ಐಗಳಕುರ್ವೆ ಗ್ರಾಮದ ಸಾರ್ವಜನಿಕರಿಗೆ ಕಾಳಜಿ ಕೇಂದ್ರಕ್ಕೆ ಬರುವಂತೆ ಗ್ರಾಮಸ್ಥರಿಗೆ ತಿಳಿಸಲಾಗಿದೆ.ಶಿರಸಿ ಕುಮಟಾ ಹೆದ್ದಾರಿಯಲ್ಲಿ ರಸ್ತೆಗೆ ಬಂದ ಮಳೆ ನೀರು ತುಂಬಿ ಹರಿಯುತ್ತಿರುವ ಅಘನಾಶಿನಿ ನದಿಗೆ ನೆರೆ ಬಂದಿದೆ.

ಕತಗಾಲ ಗ್ರಾಮದ ಬಳಿ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು ಕಾರಣ ರಸ್ತೆ ಸಂಚಾರ ಬಂದ್ ಆಗಿದೆ.ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಮತ್ತಯ ಮಲೆನಾಡು ಸಂಪರ್ಕದ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದೆ.
ಕಳೆದ ಮೂರು ನಾಲ್ಕು ತಾಸುಗಳಿಂದ ವಾಹನ ಸಂಚಾರ ಸ್ಥಗಿತವಾಗಿದೆ. ಬಸ್ ನಲ್ಲಿ ಸಂಚರಿಸುವ ಪ್ರಯಾಣಿಕರು ಪರದಾಡುವಂತಾಗಿದೆ.