ಉಡುಪಿ : ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆ, ಕೆಲವು ಗ್ರಾಮಗಳು ಜಲಾವೃತ, ಹಲವೆಡೆ ರಸ್ತೆ ಸಂಪರ್ಕ ಕಡಿತ ಹಿನ್ನೆಲೆ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
ಪರಿಸ್ಥಿತಿ ನಿಭಾಯಿಸಲು ರಾಜ್ಯದ SDRF ತಂಡ ಉಡುಪಿಗೆ ರವಾನೆ ಮಾಡಲಾಗಿದೆ, ಸುಮಾರು 250 ಸದಸ್ಯರ SDRF ತಂಡವನ್ನು ತಡರಾತ್ರಿಯೇ ಉಡುಪಿಗೆ ಕಳಿಸಿದ್ದೇವೆ.ಈತನಕ 200ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ,NDRF ತಂಡ ಕೂಡ ಕೆಲವೇ ಸಮಯದಲ್ಲಿ ಸ್ಥಳಕ್ಕೆ ತಲುಪಲಿದೆ.
ಜಿಲ್ಲಾಡಳಿತಕ್ಕೆ ಎಲ್ಲಾ ಕ್ರಮಗಳನ್ನು ತಗೆದುಕೊಳ್ಳಲು ಸೂಚಿಸಲಾಗಿದೆ,ಈ ಬಗ್ಗೆ ಕಂದಾಯ ಸಚಿವರ ಜೊತೆಯೂ ಸಮಾಲೋಚನೆ ಮಾಡಿದ್ದೇನೆ. ರಕ್ಷಣಾ ಇಲಾಖೆಯ ಒಂದು ಹೆಲಿಕಾಪ್ಟರ್ ನ್ನು ನೀಡಲು ಕೇಳಿಕೊಂಡಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.