DAKSHINA KANNADA
ಅತ್ಯಾಚಾರ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ ಹಿನ್ನಲೆ, ಮಹಾಲಿಂಗೇಶ್ವರನ ಸನ್ನಿಧಾನಕ್ಕೆ ಬಂದು ಪ್ರಾರ್ಥಿಸಿದ ಪುತ್ತಿಲ..!
ಪುತ್ತೂರು : ಬಿಜೆಪಿ ಮುಖಂಡ ಅರುಣ್ ಕುಮಾರ್ ಮೇಲೆ ಅತ್ಯಾಚಾರ ಪ್ರಕರಣದ ಎಲ್ಲಾ ತನಿಖೆಗೆ ಹೈಕೋರ್ಟ್ ನಿಂದ ತಡೆ ನೀಡಿದ ಹಿನ್ನಲೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸಿ ಅರುಣ್ ಕುಮಾರ್ ಪುತ್ತಿಲ ಅವರು ಪ್ರಾರ್ಥನೆ ಸಲ್ಲಿಸಿದರು.
ಬಳಿಕ ಮಾದ್ಯಮಗಳೊಂದಿಗೆ ಮಾತನಾಡಿದ ಅವರು ಪುತ್ತೂರಿನಲ್ಲಿ ಈ ಹಿಂದೆ ನಡೆದ ಎಲ್ಲಾ ಪ್ರಕರಣಗಳಲ್ಲಿ ನನ್ನನ್ನು ಸಿಲುಕಿಸುವ ಪ್ರಯತ್ನ ನಡೆದಿದೆ. ಶನಿಪೂಜೆ, ಅಕ್ಷತಾ ಕೊಲೆ ಪ್ರಕರಣ, ಸೌಮ್ಯ ಕೊಲೆ ಪ್ರಕರಣ ಹೀಗೆ ಹಲವು ಘಟನೆಗಳಲ್ಲಿ ನನ್ನ ವಿರುದ್ದ ಷಡ್ಯಂತ್ರ ಮಾಡಲಾಗಿತ್ತು. ಈಗಲೂ ಇದು ಮುಂದುವರೆದಿದ್ದು ನನ್ನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡುತ್ತಿದ್ದಾರೆ.
ಆದ್ರೆ ನನಗೆ ಉಳ್ಳಾಲ್ತಿ ಮತ್ತು ಮಹಾಲಿಂಗೇಶ್ವರ ದೇವರ ಮೇಲೆ ನಂಬಿಕೆ ಇದೆ.ಸತ್ಯಕ್ಕೆ ನ್ಯಾಯ ಸಿಗುತ್ತದೆ ಎನ್ನುವ ವಿಶ್ವಾಸವಿದೆ ಮತ್ತು ಭಾರತೀಯ ಜನತಾ ಪಾರ್ಟಿ ನನ್ನ ಹಿಂದೆ ನಿಂತಿದೆ. ನನ್ನ ಸಂಕಷ್ಟದ ದಿನದಲ್ಲಿ ನನಗೆ ಸಹಕರಿಸಿದ ಬಿಜೆಪಿ ಮುಖಂಡರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದ ಅವರು ಕೊನೆಯ ಉಸಿರಿರುವ ವರೆಗೂ ಹಿಂದುತ್ವಕ್ಕಾಗಿ ಹೋರಾಡುತ್ತೇನೆ ಮತ್ತು ಭಾರತೀಯ ಜನತಾ ಪಕ್ಷವನ್ನು ಜಿಲ್ಲೆಯಲ್ಲಿ ಮತ್ತಷ್ಟು ಬಲಿಷ್ಟಗೊಳಿಸುತ್ತೇನೆ ಎಂದು ಹೇಳಿದ್ದಾರೆ.
You must be logged in to post a comment Login