KARNATAKA
ಕುಟುಂಬ ಜಗಳದಲ್ಲಿ ಮಗುವಿನ ಎದೆಗೆ ಕಾಲಿಟ್ಟು ಕೊಂದ ಪಾಪಿ, ಬೆಳಗಾವಿಯಲ್ಲೊಂದು ಅಮಾನುಷ ಘಟನೆ..!
ಬೆಳಗಾವಿ : ಎರಡು ಕುಟುಂಬಗಳ ನಡುವಿನ ಜಗಳದಲ್ಲಿ ಮಗುವೊಂದು ಬಲಿಯಾದ ಘಟನೆ ಬೆಳಗಾವಿ(belgaum) ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಮೂರು ವರ್ಷದ ಮಗುವಿನ ಎದೆಮೇಲೆ ಕಾಲಿಟ್ಟು ವ್ಯಕ್ತಿಯೋರ್ವ ಮಗುವನ್ನು ಅಮಾನುಷವಾಗಿ ಹತ್ಯೆ ಮಾಡಿದ್ದಾನೆ. ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ (3) ಮೃತ ಮಗುವಾಗಿದ್ದು ಜೋತಿಭಾ ತುಕಾರಾಮ ಬಾಬರ ಮಗುವನ್ನೇ ಕೊಂದ ಆರೋಪಿಯಾಗಿದ್ದಾನೆ. ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿದೆ. ಈ ವೇಳೆ ಜಗಳ ತಾರಕಕ್ಕೇರಿ ಜೋತಿಭಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ರಾಕ್ಷಸನಂತೆ ವರ್ತಿಸಿ ಕೊಂದಿದ್ದಾನೆ ಎಂದು ಮೃತ ಮಗುವಿನ ಕುಟುಂಬಸ್ಥರು ಆರೋಪಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಈ ಸಂಬಂಧ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.