LATEST NEWS
‘ಕಬಕ ಚಲೋ’ ವೇಳೆ ಪೊಲೀಸರೊಂದಿಗೆ ಮಾತಿನ ಚಕಮಕಿ

ಪುತ್ತೂರು, ಅಗಸ್ಟ್ 17: ಸಾವರ್ಕರ್‌ಗೆ ಅವಮಾನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನಾ ರ್ಯಾಲಿ ವೇಳೆ ಹಿಂದೂ ಸಂಘಟನೆ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ.
ಪುತ್ತೂರಿನಿಂದ ಕಬಕ ಕಡೆಗೆ ತೆರಳುತ್ತಿರುವ ವೇಳೆ ನೂರಾರು ಸಂಖ್ಯೆಯಲ್ಲಿ ಸೇರಿದ ಸಂಘಟನೆಯ ಕಾರ್ಯಕರ್ತರು SDPI ಪಕ್ಷದ ವಿರುದ್ಧ ಘೋಷಣೆ ಕೂಗಿದರು. ಇದೇ ವೇಳೆ ಸ್ವಾತಂತ್ರ್ಯ ರಥ ತಡೆದ ಆರೋಪಿಗಳ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸುವಂತೆ ಒತ್ತಾಯ ನಡೆಸಿದರು.

ಇದೇ ವೇಳೆ ರ್ಯಾಲಿ ನಡುವೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದ್ದು, ಪೊಲೀಸರು ಬಿಗು ಬಂದೋಬಸ್ತ್.
Video: