Connect with us

    KARNATAKA

    ಮಾಧ್ಯಮಗಳ ವಿರುದ್ದ ಕೋರ್ಟ್​ನಿಂದ ತಡೆಯಾಜ್ಞೆ ತಂದ ಕೇಂದ್ರ ಸಚಿವ ಸದಾನಂದಗೌಡ

    ಬೆಂಗಳೂರು: ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡರಿಗೂ ಸಿಡಿ ಭಯ ಶುರುವಾಗಿದ್ದು, ತಮ್ಮ ವಿರುದ್ದ ಯಾವುದೇ ಮಾನಹಾನಿಕರ ವರದಿ ಮಾಡದಂತೆ ಮಾಧ್ಯಮಗಳ ವಿರುದ್ದ ನಿರ್ಬಂಧಕಾಜ್ಞೆಯನ್ನು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್​ನಿಂದ ಪಡೆದುಕೊಂಡಿದ್ದಾರೆ.
    ಕೇಂದ್ರ ಸಚಿವ ಸಂಪುಟ ಪುನಾರಚನೆ ಸಂದರ್ಭದಲ್ಲಿ ಕೆಲ ಪತ್ರಿಕೆ, ಚಾನಲ್​​ಗಳಲ್ಲಿ ತಮ್ಮ ವಿರುದ್ಧ ಸುಳ್ಳುಸುದ್ದಿ ಪ್ರಸಾರ ಮಾಡುವ ಸಾಧ್ಯತೆ ಇದೆ. ಕಿಡಿಗೇಡಿಗಳು ನಕಲಿ ಸಿಡಿ ಸೃಷ್ಟಿಸಿ ಮಾಧ್ಯಮಗಳಲ್ಲಿ ಹರಿಬಿಡುವ ಸಾಧ್ಯತೆಯೂ ಇದೆ ಎಂದು ಕಾರಣ ನೀಡಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.


    ಈ ಕುರಿತು ಕೆಲ ಹಳೆಯ ದೃಷ್ಟಾಂತಗಳ ಉದಾಹರಣೆಯನ್ನೂ ನೀಡಿರುವ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಹಿಂದೆ ಅಮೆರಿಕದ ಅಧ್ಯಕ್ಷರಾಗಿದ್ದ ಬರಾಕ್ ಒಬಾಮಾ, ಬ್ರಿಟನ್ ರಾಣಿ ಕ್ವೀನ್ ಎಲಿಜಬೆತ್ ಕುರಿತು ನಕಲಿ ವಿಡಿಯೋ ಮಾಡಲಾಗಿತ್ತು ಎಂದು ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

    ಇಂಥ ವಿಡಿಯೋ ಪ್ರಸಾರ ಮಾಡಿದರೆ ಘನತೆಗೆ ಧಕ್ಕೆ ಆಗಲಿದೆ. ಅದರಿಂದ ಚಾರಿತ್ರ್ಯ ವಧೆಯಾಗಲಿದೆ. ಆದ್ದರಿಂದ ತಮ್ಮ ಬಗ್ಗೆಯೂ ಇಂತಹ ವಿಡಿಯೋ ಪ್ರಸಾರ ಮಾಡುವ ಅಪಾಯವಿದ್ದು, ಹಾಗಾದಲ್ಲಿ ಘನತೆಗೆ ಧಕ್ಕೆಯಾಗಲಿದೆ. ಚಾರಿತ್ರ್ಯ ವಧೆಯಾಗಲಿದೆ ಎಂದು ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿಯನ್ನು ಮಾನ್ಯ ಮಾಡಿದ ಕೋರ್ಟ್, ಮಾನಹಾನಿಕರ ವರದಿ ಮಾಡದಂತೆ ನಿರ್ಬಂಧ ವಿಧಿಸಿದೆ.

    ಈ ಮಧ್ಯೆ, ಚುನಾವಣೆ, ಸಂಪುಟ ರಚನೆ ಸಂದರ್ಭದಲ್ಲಿ ವಿರೋಧಿಗಳು ಈ ಮುಂಚೆಯೂ ನನ್ನ ವೈಯಕ್ತಿಕ ತೇಜೋವಧೆಗೆ ಪ್ರಯತ್ನಿಸಿದ್ದರು. ಮಾಧ್ಯಮ ಸ್ವಾತಂತ್ರ್ಯವನ್ನು ನಾನು ಸಂಪೂರ್ಣ ಗೌರವಿಸುತ್ತೇನೆ. ಆದರೆ ವಿರೋಧಿಗಳ ಸಂಚಿಗೆ ಬಲಿಯಾಗಿ ತಪ್ಪು ಮಾಹಿತಿ ಪ್ರಸರಣದಲ್ಲಿ ತೊಡಗಬಾರದೆಂಬ ಉದ್ದೇಶದಿಂದ ‌ನಿರ್ಬಂಧ ಆದೇಶ ತರಬೇಕಾಗಿ ಬಂತು. ದಯವಿಟ್ಟು ಯಾರೂ ಅನ್ಯಥಾ ಭಾವಿಸಬಾರದು ಎಂದು ಡಿವಿಎಸ್ ಟ್ವೀಟ್ ಮಾಡಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *