Connect with us

DAKSHINA KANNADA

ಇಂದು ಡಿವಿ ಸದಾನಂದ ಗೌಡ ಸುದ್ದಿಗೋಷ್ಟಿ,ಕೈ ಹಿಡಿಯುತ್ತಾರಾ ಅಥವಾ ರಾಜಕೀಯ ಸನ್ಯಾಸ ತಗೋಳ್ತಾರಾ ಗೌಡ್ರು..!?

ಬೆಂಗಳೂರು : ಲೋಕಸಭಾ ಚುನಾವಣೆ ಟಿಕೆಟ್‌ಗೆ ಸಂಬಂಧಿಸಿದಂತೆ ಕೆ. ಎಸ್.ಈಶ್ವರಪ್ಪ ಬಳಿಕ ಮಾಜಿ ಸಿಎಂ ಡಿ.ವಿ.ಸದಾ ನಂದಗೌಡರೂ ಅಸಮಾಧಾನಗೊಂಡಿದ್ದು, ಇಂದು ತಮ್ಮ ಮುಂದಿನ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ.

ಈ ಹಿನ್ನೆಲೆಯಲ್ಲಿಂದು ಸುದ್ದಿಗೋಷ್ಟಿ ಕರೆದಿದ್ದು ತಮ್ಮ ನಿರ್ಧಾರ ಪ್ರಕಟಿಸಲಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿವಿಎಸ್ ‘ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವಂತೆ ಆ ಪಕ್ಷದ ನಾಯಕರು ನನ್ನನ್ನು ಸಂಪರ್ಕಿಸಿರುವುದು ನಿಜ. ಈ ಬಗ್ಗೆ ಕುಟುಂಬದವರೊಂದಿಗೆ ಚರ್ಚಿಸಿ ಇಂದು ನನ್ನ ಅಂತರಾಳದ ವಿಚಾರವನ್ನು ತಿಳಿಸುತ್ತೇನೆ’ ಎಂದಿದ್ದಾರೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ನೂರಕ್ಕೆ ನೂರರಷ್ಟು ನನ್ನ ಹೆಸರು ಮಾತ್ರ ಬಂತು. ದೆಹಲಿ ಹಾಗೂ ಸ್ಥಳೀಯವಾಗಿ ಒಂದಷ್ಟು ವಿದ್ಯಮಾನ ನಡೆದಿರುವುದು ನನ್ನ ಗಮನಕ್ಕೆ ಬಂದಿದೆ. ನಿಮಗೇ ಟಿಕೆಟ್ ಎಂದು ಹೇಳಿ ಕೊನೆಯ ಕ್ಷಣದಲ್ಲಿ ನನ್ನ ರಕ್ಷಣೆಗೆ ಬರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ‘ರಾಜ್ಯದಲ್ಲಿ ನನಗೆ ಆಗಿರುವ ಅನ್ಯಾಯದ ಬಗ್ಗೆ ಕೆಲವೊಂದು ಮನದಾಳದ ವಿಚಾರಗಳನ್ನು ಹೇಳಿಕೊಳ್ಳಬೇಕಿದೆ. ಅದಕ್ಕಾಗಿ ಇಂದು ಸುದ್ದಿಗೋಷ್ಠಿ ಕರೆಯುತ್ತೇನೆರಾಜಕೀಯದಲ್ಲಿ ಏರುಪೇರು, ಮುಜುಗರ ಸಹಜ. ಆದರೆ, ತಿಳಿದೂ ತಿಳಿದು ಹೀಗೆ ಮಾಡಿರುವುದು ಬೇಜಾ ರಾಗಿದೆ’ ಎಂದರು.
ರಾಜಕೀಯ ನಿವೃತ್ತಿ ಘೋಷಣೆ ಸಾಧ್ಯತೆ..!?
ಸದಾನಂದಗೌಡ ಕಾಂಗ್ರೆಸ್‌ಗೆ ಹೋಗುವ ಬದಲು ರಾಜಕೀಯದಿಂದಲೇ ನಿವೃತ್ತಿ ಘೋಷಿಸುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ. 6 ತಿಂಗಳ ಹಿಂದೆಯೇ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ಘೋಷಿಸಿದ್ದರು. ಬಳಿಕ ಬಸವರಾಜ ಬೊಮ್ಮಾಯಿ, ಆರ್.ಅಶೋಕ್ ಹಾಗೂ ಅವರು ಡಾ.ಸಿ.ಎನ್.ಅಶ್ವತ್ಥನಾರಾಯಣ ಸದಾನಂದಗೌಡರ ನಿವಾಸಕ್ಕೆ ತೆರಳಿ ಮತ್ತೊಮ್ಮೆ ಸ್ಪರ್ಧಿಸಬೇಕು ಎಂಬ ಮನವಿ ಮಾಡಿದ್ದರು. ವಾಸ್ತವವಾಗಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಹೊರಗಿನವರು ಬಂದು ಕಣಕ್ಕಿಳಿಯಬಹುದು ಎಂಬ ಆತಂಕದಿಂದ ಈ ನಾಯಕರು ಗೌಡರಿಗೆ ಒತ್ತಡ ಹೇರಿದ್ದರು. ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರೂ ಗೌಡರ ಹೆಸರನ್ನೇ ಪ್ರಮುಖವಾಗಿ ಶಿಫಾರಸು ಮಾಡಿದ್ದರು. ಹೀಗಾಗಿ, ಸದಾನಂದಗೌಡರು ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಂಡರು. ಆದರೆ, ಕೊನೆಯ ಹಂತದಲ್ಲಿ ಟಿಕೆಟ್ ತಪ್ಪಿ ಹೋಯಿತು. ಇದು ಅವರಲ್ಲಿ ತೀವ್ರ ಆಕ್ರೋಶ ಉಂಟು ಮಾಡಿದೆ

Share Information
Continue Reading
Advertisement
Click to comment

Leave a Reply

Your email address will not be published. Required fields are marked *