LATEST NEWS
ಮಂಗಳೂರು ಪೊಲೀಸ್ ಕಮಿಷನರ್ ವರ್ಗಾವಣೆಗೆ ಆಗ್ರಹಿಸಿ ಡಿವೈಎಫ್ಐ ಪ್ರತಿಭಟನೆ
ಮಂಗಳೂರು ಜನವರಿ 11: ಮಂಗಳೂರು ಪೊಲೀಸ್ ಕಮಿಷನರ್ ಅವರನ್ನು ಅಮಾನಕು ಮಾಡಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಡಿವೈಎಫ್‌ನ ದ.ಕ. ಜಿಲ್ಲಾ ಸಮಿತಿ ನೇತೃತ್ವದಲ್ಲಿ ಭಿತ್ತಿಪತ್ರ ಪ್ರದರ್ಶಿಸಲು ತಯಾರಿ ನಡೆಸಿದ್ದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನರಿಂಗಾನ ಕಂಬಳಕ್ಕೆ ತೆರಳುವಾಗ ನಂತೂರು ಬಳಿ ಭಿತ್ತಿಪತ್ರ ಪ್ರದರ್ಶನ ನಡೆಸಲು ಡಿವೈಎಫ್‌ಐ ದ.ಕ.ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ನೇತೃತ್ವದಲ್ಲಿ ಡಿವೈಎಫ್‌ಐ ಕಾರ್ಯಕರ್ತರು ತೆರಳುತ್ತಿದ್ದಾಗ ಅವರನ್ನು ಪೊಲೀಸರು ತಡೆದರು.
ಮುಖ್ಯಮಂತ್ರಿ ಅವರು ವಿಮಾನ ನಿಲ್ದಾಣದಿಂದ ವಾಹನದ ಮೂಲಕ ಬರುವ ವೇಳೆ ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಪ್ರಮುಖರಾದ ಮನೋಜ್ ವಾಮಂಜೂರು, ನವೀನ್ ಕೊಂಚಾಡಿ, ರಿಝ್ವಾನ್ ಹರೇಕಳ, ಅಶ್ರಫ್ ಹರೇಕಳ, ಕೃಷ್ಣ ತಣ್ಣೀರುಬಾವಿ, ಯೋಗೀತ್ ಉಳ್ಳಾಲ, ರಝಾಕ್ ಮುಡಿಪು, ನೌಶದ್ ಕಣ್ಣೂರು, ಸಾದಿಕ್ ಮುಲ್ಕಿ, ನೌಶದ್ ಬಾವ ಪಂಜಿಮುಗೇರು ಹಾಗು ಮತ್ತಿತರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.