LATEST NEWS
ಉಳ್ಳಾಲ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಡಿವೈಎಫ್ಐ ಕಾರ್ಯಕರ್ತರು

ಮಂಗಳೂರು ಜನವರಿ 16: ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ಖಂಡಿಸಿ ತೊಕ್ಕೊಟ್ಟುವಿನಲ್ಲಿ ಪ್ರತಿಭಟನೆ ನಡೆಸಿದ ಡಿವೈಎಫ್ಐ ಕಾರ್ಯಕರ್ತರ ವಿರುದ್ದ ಎಫ್ಐಆರ್ ದಾಖಲಿಸಿರುವುದನ್ನು ಖಂಡಿಸಿ ಡಿವೈಎಫ್ಐ ಕಾರ್ಯಕರ್ತರು ಉಳ್ಳಾಲ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ.
ನೂರಾರು ಸಂಖ್ಯೆಯಲ್ಲಿ ಆಗಮಿಸಿದ ಡಿವೈಎಫ್ಐ ಕಾರ್ಯಕರ್ತರು ಉಳ್ಳಾಲ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಠಾಣೆಯ ಮುಂಭಾಗ ಬ್ಯಾರಿಕೇಡ್ ಆಳವಡಿಸಿದ ಪೊಲೀಸರು ಉಳ್ಳಾಲ ಠಾಣೆಯ ಮುಂಭಾಗವೇ ಪ್ರತಿಭಟನಾಕಾರರನ್ನು ತಡೆದಿದ್ದಾರೆ.

ಆರ್ ಎಸ್ಎಸ್ ಹಾಗೂ ಶಾಸಕರ ಚೇಲಾಗಳಂತೆ ಪೊಲೀಸರು ವರ್ತಿಸುತ್ತಿದ್ದಾರೆ ಎಂದು ಡಿವೈಎಫ್ ಐ ಆರೋಪಿಸಿ ಮಾಸ್ತಿಕಟ್ಟೆಯಿಂದ ಉಳ್ಳಾಲ ಠಾಣೆವರೆಗೆ ರ್ಯಾಲಿ ನಡೆಸಿ ಘೋಷಣೆಗಳೊಂದಿಗೆ ಘೋಷಣೆಗಳೊಂದಿಗೆ ಮುತ್ತಿಗೆ ಹಾಕಿದ ಕಾರ್ಯಕರ್ತರುಮುತ್ತಿಗೆ ಹಾಕಿಲು ಯತ್ನಿಸಿದರು. ಡಿವೈಎಫ್ ಐ ಪ್ರತಿಭಟನೆ ಹಿನ್ನಲೆಯಲ್ಲಿ ಅಧಿಕ ಸಂಖ್ಯೆಯಲ್ಲಿ ಪೊಲೀಸರು ಉಳ್ಳಾಲ ಠಾಣೆಯ ಸುತ್ತಮುತ್ತ ನಿಯೋಜಿಸಲಾಗಿತ್ತು, ಪೊಲೀಸರ ವಿರುದ್ದ ರಸ್ತೆಯಲ್ಲೇ ಕುಳಿತು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಡಿವೈಎಫ್ಐ ಕಾರ್ಯಕರ್ತರು. ಸ್ಪೀಕರ್ ಯು.ಟಿ.ಖಾದರ್ ಹಾಗೂ ಖಾಕಿ ಚಡ್ಡಿ ಪೊಲೀಸರು ಎಂದು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸ್ ಠಾಣೆ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.