LATEST NEWS
ಕಾರ್ಕಳ : ಡ್ರೈವರಿಗೆ ಮುಂಜಾನೆ ನಿದ್ರೆಯ ಮಂಪರು, ಮರಕ್ಕೆ ಗುದ್ದಿತು ಕಾರಿನ ಬಂಪರು..!!
ಗದಗದಿಂದ ಧರ್ಮಸ್ಥಳಕ್ಕೆ ಸಾಗುತ್ತಿದ್ದ ಕಾರೊಂದು ಮುಂಜಾನೆ 5 ಗಂಟೆ ಸುಮಾರಿಗೆ ಉಡುಪಿ ಕಾರ್ಕಳ( karkala) ದ ಶಿರ್ಲಾಲು ನಿಡ್ಡೆಪಾದೆಯಲ್ಲಿ ಅಪಘಾತಕ್ಕೀಡಾಗಿದೆ.
ಕಾರ್ಕಳ: ಗದಗದಿಂದ ಧರ್ಮಸ್ಥಳಕ್ಕೆ ಸಾಗುತ್ತಿದ್ದ ಕಾರೊಂದು ಮುಂಜಾನೆ 5 ಗಂಟೆ ಸುಮಾರಿಗೆ ಉಡುಪಿ ಕಾರ್ಕಳ (karkala) ದ ಶಿರ್ಲಾಲು ನಿಡ್ಡೆಪಾದೆಯಲ್ಲಿ ಅಪಘಾತಕ್ಕೀಡಾಗಿದೆ.
ನಿದ್ರೆ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ. ಡಿಕ್ಕಿಯ ಪರಿಣಾಮವಾಗಿ ಕಾರು ಪಲ್ಟಿಯಾಗಿ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರು ಪ್ರಯಾಣಿಸುತ್ತಿದ್ದರು. ಇವರ ಪೈಕಿ ಇಬ್ಬರು ಗಾಯಗೊಂಡಿದ್ದು, ಓರ್ವರಿಗೆ ಕಾರ್ಕಳದ ಗಾಜ್ರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಗಂಭೀರ ಗಾಯಗೊಂಡಿದ್ದ ಇನ್ನೋರ್ವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಿಸಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
Continue Reading