Connect with us

    LATEST NEWS

    ಅಪ್ಘಾನಿಸ್ತಾನದಲ್ಲಿ ಭೂಕಂಪ – 920ಕ್ಕೂ ಅಧಿಕ ಸಾವು

    ಕಾಬೂಲ್: ಪೂರ್ವ ಅಪ್ಘಾನಿಸ್ತಾನದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಕನಿಷ್ಠ 920 ಮಂದಿ ಸಾವನಪ್ಪಿದ್ದಾರೆ ಎಂದು ಹೇಳಲಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.


    ಪೂರ್ವ ಅಪ್ಘಾನಿಸ್ತಾನದಲ್ಲಿ ರಿಕ್ಟರ್ ಮಾಪಕದಲ್ಲಿ 6.1ರ ತೀವ್ರತೆಯಲ್ಲಿ ಭೂಕಂಪನವಾಗಿದೆ. ಪಾಕ್ಟಿಕಾ ಪ್ರಾಂತ್ಯದಲ್ಲಿ ಅತಿ ಹೆಚ್ಚು ಸಾವು-ನೋವುಗಳು ಸಂಭವಿಸಿವೆ. ಈ ಭಾಗದಲ್ಲಿ ಕನಿಷ್ಠ 920 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ. 600ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ ಎಂದು ತಾಲಿಬಾನ್ ಆಡಳಿತದಲ್ಲಿನ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯಸ್ಥ ಮೊಹಮ್ಮದ್ ನಸೀಮ್ ಹಕ್ಕಾನಿ ತಿಳಿಸಿದ್ದಾರೆ.

    ಪೂರ್ವದ ಪ್ರಾಂತ್ಯಗಳಾದ ನಂಗರ್ಹಾರ್ ಮತ್ತು ಖೋಸ್ಟ್‌ಗಳಲ್ಲಿ ಕೂಡ ಅಪಾರ ಪ್ರಮಾಣದ ಸಾವು ನೋವುಗಳು ವರದಿಯಾಗಿವೆ. ಆಗ್ನೇಯ ಭಾಗದ ನಗರ ಖೋಸ್ಟ್‌ನಿಂದ ಸುಮಾರು 44 ಕಿಮೀ ದೂರದಲ್ಲಿ ಹಾಗೂ 51 ಕಿಮೀ ಆಳದಲ್ಲಿ ಭೂಕಂಪನ ಉಂಟಾಗಿದೆ. ಖೋಸ್ಟ್‌ನಲ್ಲಿ ಕನಿಷ್ಠ 25 ಮಂದಿ ಬಲಿಯಾಗಿದ್ದಾರೆ. ನಂಗರ್ಹಾರ್ ಪ್ರಾಂತ್ಯದಲ್ಲಿ ಕೂಡ ಐವರು ಮೃತಪಟ್ಟಿರುವುದು ವರದಿಯಾಗಿದೆ. ಅಪಾರ ಪ್ರಮಾಣದ ಕಟ್ಟಡಗಳು ಧರೆಗುರುಳಿವೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *