FILM
ಅಕ್ರಮ ಹಣ ವರ್ಗಾವಣೆ – ತೆಲುಗು ಸೂಪರ್ ಸ್ಟಾರ್ ಮಹೇಶ್ ಬಾಬುಗೆ ಇಡಿ ಸಮನ್ಸ್

ಹೈದರಾಬಾದ್ ಎಪ್ರಿಲ್ 22: ಜಾಹಿರಾತು ಒಂದರಲ್ಲಿ ನಟಿಸಲು ಕೋಟಿಗೂ ಅಧಿಕ ಹಣವನ್ನು ನಗದು ಮೂಲಕ ಪಡೆದ ಆರೋಪದ ಮೇಲೆ ತೆಲುಗು ನಟ ಸೂಪರ್ ಸ್ಟಾರ್ ಮಹೇಶ್ ಬಾಬು ಅವರಿಗೆ ಇಡಿ ಸಮನ್ಸ್ ನೀಡಿದೆ. ಎಪ್ರಿಲ್ 28 ಕ್ಕೆ ಹಾಜರಾಗುವಂತೆ ಸೂಚಿಸಿದೆ.
ಹೈದರಾಬಾದ್ ಮೂಲದ ರಿಯಲ್ ಎಸ್ಟೇಟ್ ಸಂಸ್ಥೆಗಳಾದ ಸಾಯಿ ಸೂರ್ಯ ಡೆವಲಪರ್ಸ್ ಮತ್ತು ಸುರಾನಾ ಗ್ರೂಪ್ ಮೇಲೆ ಹಣ ಅಕ್ರಮ ವಹಿವಾಟು ತಡೆ ಕಾಯ್ದೆ ಅಡಿ ಇಡಿ ಪ್ರಕರಣ ದಾಖಲಿಸಿ ದಾಳಿ ನಡೆಸಿತ್ತು. ಈ ಕಂಪನಿಗಳ ಜಾಹೀರಾತಿನಲ್ಲಿ ಮಹೇಶ್ ಬಾಬು ನಟಿಸಿದ್ದರು. ನಟಿಸಿದ್ದಕ್ಕೆ ಮಹೇಶ್ ಬಾಬು ಅವರಿಗೆ 5.9 ಕೋಟಿ ರೂ. ಸಂಭಾವನೆ ಸಿಕ್ಕಿತ್ತು. ಈ ಪೈಕಿ 3.4 ಕೋಟಿ ರೂ. ಚೆಕ್ ಮೂಲಕ ಮತ್ತು 2.5 ಕೋಟಿ ರೂ. ನಗದು ಮೂಲಕ ಪಾವತಿಸಲಾಗಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಈ ನಗದು ವಹಿವಾಟಿನ ಬಗ್ಗೆ ಸಂಶಯ ವ್ಯಕ್ತವಾದ ಹಿನ್ನೆಲೆಯಲ್ಲಿ ಈಗ ಮಹೇಶ್ ಬಾಬು ಅವರಿಗೆ ಇಡಿ ಸಮನ್ಸ್ ಜಾರಿ ಮಾಡಿದೆ.
