Connect with us

    KARNATAKA

    ಎಡಿಟ್ ಮಾಡಿದ ಪೋಟೋ ಪೋಸ್ಟ್ ಮಾಡಿದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಮೇಲೆ ಎಫ್ಐಆರ್

    ತುಮಕೂರು ಅಕ್ಟೋಬರ್ 14: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಪೋಸ್ಟ್ ಮಾಡಿದ ಬಿಜೆಪಿ ಮಹಿಳಾ ಕಾರ್ಯಕರ್ತೆ ಮೇಲೆ ಎಫ್ಐಆರ್ ದಾಖಲಾಗಿದೆ.


    ಬಿಜೆಪಿ ಮಹಿಳಾ ಕಾರ್ಯಕರ್ತೆ ಶಕುಂತಲಾ ನಟರಾಜ್ ಬೆಂಗಳೂರಿನ ಲುಲು ಶಾಪಿಂಗ್ ಮಾಲ್‍ನಲ್ಲಿ ಭಾರತದ ಬಾವುಟಕ್ಕಿಂತ ಎತ್ತರದಲ್ಲಿ ಪಾಕಿಸ್ತಾನ ಬಾವುಟ ಹಾರಿಸಿದ್ದಾರೆ ಎಂದು ಪೋಸ್ಟ್ ಹಂಚಿಕೊಂಡಿದ್ದರು.
    ಶಕುಂತಲಾ ಪೋಸ್ಟ್​ ಎಷ್ಟು ಸತ್ಯ ಎಂಬುದನ್ನು ತಿಳಿದುಕೊಳ್ಳಲು ಅದರ ಮೂಲ ಹುಡುಕಿ ಫ್ಯಾಕ್ಟ್ ಚೆಕ್ ಮಾಡಿದ ಪೊಲೀಸರಿಗೆ ನಕಲಿ ಪೋಸ್ಟ್​ ಎಂಬುದು ಗೊತ್ತಾಗಿದೆ. ಪೋಟೋವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ತುಮಕೂರಿನ ಜಯನಗರ ಠಾಣೆಯಲ್ಲಿ ಸುಮುಟೋ ಕೇಸ್ ದಾಖಲಿಸಲಾಗಿತ್ತು.


    ಭಾರತದ ಬಾವುಟಕ್ಕಿಂತ ಬೇರೆ ಯಾವುದೇ ದೇಶದ ಬಾವುಟ ಎತ್ತರದಲ್ಲಿ ಇರಬಾರದು ಅನ್ನೋ ಸಾಮಾನ್ಯ ಜ್ಞಾನ ಇಲ್ಲವೇ ನಿಮ್ಮ ಮಾಲ್‍ನವರಿಗೆ? ಬಾಯ್ಕಾಟ್ ಲುಲುಮಾಲ್ ಹ್ಯಾಸ್ ಟ್ಯಾಗ್ ಬಳಸಿ ಡಿ.ಕೆ. ಶಿವಕುಮಾರ್ (DK Shivakumar) ಅವರನ್ನು ಟ್ಯಾಗ್ ಮಾಡಿ ಪೋಸ್ಟ್ ಹಂಚಿಕೊಂಡಿದ್ದರು. ಜನರ ಭಾವನೆಗಳನ್ನು ಕೆರಳಿಸುವ ಕೆಲಸ ಮಾಡಿದ್ದಾರೆ ಎಂದು ಐಪಿಸಿ 153 (ಬಿ) ಅಡಿಯಲ್ಲಿ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿಂದೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಹೇಳಿಕೆ ಆರೋಪದ ಮೇಲೆ ಶಕುಂತಲಾ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿತ್ತು.

    Share Information
    Advertisement
    Click to comment

    You must be logged in to post a comment Login

    Leave a Reply