KARNATAKA
ತುಮಕೂರು: ಮಧು ಬಂಗಾರಪ್ಪರ ಕಾರು ಅಪಘಾತ,ಸಚಿವ ಪಾರು..!

ತುಮಕೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತುಮಕೂರಿನ ನಂದಿಹಳ್ಳಿಯ ಹೆದ್ದಾರಿಯಲ್ಲಿ ಬುಧವಾರ ತಡರಾತ್ರಿ ಸುಮಾರಿಗೆ ಈ ಅಪಘಾತವಾಗಿದೆ. ಚಲಿಸುತ್ತಿದ್ದ ಲಾರಿಗೆ ಕಾರು ಹಿಂಭಾಗದಿಂದ ಗುದ್ದಿದ್ದು, ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ.

ಕಾರಿನಲ್ಲಿ ಸಚಿವರು ಸೇರಿ ಮೂವರು ಪ್ರಯಾಣಿಸುತ್ತಿದ್ದು, ಎಲ್ಲರೂ ಪ್ರಾಣಾಪಾಯದಿಂದ ಬಚಾವ್ ಆಗಿದ್ದಾರೆ. ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದಾಗ ಮಾರ್ಗ ಮಧ್ಯೆ ಈ ದುರಂತ ಸಂಭವಿಸಿದ್ದು ಬದಲಿ ವಾಹನ ವ್ಯವಸ್ಥೆ ಮಾಡಿಕೊಂಡು ಸಚಿವರು ಬೆಂಗಳೂರಿಗೆ ತೆರಳಿದ್ದಾರೆ.