Connect with us

    LATEST NEWS

    ದಕ್ಷಿಣಕನ್ನಡ ಜಿಲ್ಲೆಯಲ್ಲಿ ಚುನಾವಣಾ ಅಕ್ರಮಗಳ ಬಗ್ಗೆ ಹದ್ದಿನಕಣ್ಣು

    ದಕ್ಷಿಣಕನ್ನಡ ಜಿಲ್ಲೆಯಲ್ಲಿ ಚುನಾವಣಾ ಅಕ್ರಮಗಳ ಬಗ್ಗೆ ಹದ್ದಿನಕಣ್ಣು

    ಮಂಗಳೂರು ಏರ್ಪಿಲ್ 2: ರಾಜ್ಯ ವಿಧಾನಸಭಾ ಚುನಾವಣಾ ವೇಳಾ ಪಟ್ಟಿಯೊಂದಿಗೆ ಘೋಷಿಸಿದ್ದು, ಮಾರ್ಚ್ 27 ರಿಂದಲೇ ರಾಜ್ಯದಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೂಡ ನೀತಿ ಸಂಹಿತೆ ಜಾರಿಯಲ್ಲಿದ್ದು ಚುನಾವಣಾ ಅಕ್ರಮಗಳಬಗ್ಗೆ ಚುನಾವಣಾ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದಾರೆ.

    ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ತಡೆಯುವ ಉದ್ದೇಶದಿಂದ ವಿಧಾನ ಸಭಾ ಕ್ಷೇತ್ರವಾರು ವಿವಿಧ ತಂಡಗಳನ್ನು ರಚಿಸಲಾಗಿದ್ದು, ಸಾರ್ವಜನಿಕರು ಯಾವುದೇ ರಾಜಕೀಯೇತರ ಸಾರ್ವಜನಿಕ ಕಾರ್ಯಕ್ರಮಗಳನ್ನು ಆಯೋಜಿಸುವಾಗ ಸಂಬಂಧಪಟ್ಟ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳಿಗೆ ಮುಂಚಿತವಾಗಿ ಮಾಹಿತಿಯನ್ನು ನೀಡುವುದು ಹಾಗೂ ಚುನಾವಣಾ ನೀತಿ ಸಂಹಿತೆಗಳನ್ನುಅನುಸರಿಸುವಂತೆ ನೋಡಿಕೊಳ್ಳಬೇಕೆಂದು ಸೂಚನೆ ನೀಡಲಾಗಿದೆ.

    ಸಾರ್ವಜನಿಕರು 50 ಸಾವಿರ ರೂಪಾಯಿ ಕ್ಕಿಂತ ಹೆಚ್ಚು ನಗದು ಕೊಂಡೊಯ್ಯುವ ಸಂದರ್ಭದಲ್ಲಿ ಪೂರಕ ದಾಖಲೆಗಳನ್ನು ಇಟ್ಟುಕೊಳ್ಳಬೇಕು ಎಮದು ಸೂಚಿಸಲಾಗಿದೆ. ಯಾವುದೇ ರೀತಿಯ ಉಡುಗೊರೆ ಸಾಮಾಗ್ರಿಗಳ ಮೌಲ್ಯ10 ಸಾವಿರ ರೂಪಾಯಿ ಗಳಿಗಿಂತ ಹೆಚ್ಚಿನದಾಗಿದ್ದಲ್ಲಿ ವಶಕ್ಕೆ ಪಡೆಯಲಾಗುವುದೆಂದು ಎಚ್ಚರಿಸಲಾಗಿದೆ. ಜಿಲ್ಲೆಯಲ್ಲಿ ಸೆಕ್ಟರ್ ಮೆಜಿಸ್ಟ್ರೇಟ್ ಗಳು ಹಾಗು ಸಾಂಖ್ಯಿಕ ವಿಚಕ್ಷಣಾ ತಂಡಗಳು ನಿರಂತರವಾಗಿ ಕಾರ್ಯಚರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾತ್ ಸೆಂಥೀಲ್ ಅದೆಶ ನೀಡಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *