FILM
ಭಾರತದ ಗಾನಕೋಗಿಲೆ ಲತಾ ಮಂಗೇಶ್ಕರ್ ಇನ್ನಿಲ್ಲ….!!
ಮುಂಬೈ: ಭಾರತದ ಗಾನಕೋಗಿಲೆ ಭಾರತ ರತ್ನ ಲತಾ ಮಂಗೇಶ್ಕರ್ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಕೊರೊನಾ ಸೊಂಕಿನ ಹಿನ್ನಲೆ ಮುಂಬೈಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಲತಾ ಮಂಗೇಶ್ಕರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನ ಹೊಂದಿದ್ದಾರೆ.
92 ವರ್ಷದ ಲತಾ ಮಂಗೇಶ್ಕರ್ ಕೋವಿಡ್ ಸೋಂಕಿನ ಕಂಡುಬಂದು ಕಳೆದ ಜನವರಿ 8ರಂದು ಮುಂಬೈಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿ ತೀವ್ರ ನಿಗಾ ಘಟಕದಲ್ಲಿದ್ದರು. ಕೆಲ ದಿನಗಳ ನಂತರ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಸುಧಾರಣೆಯಾಗಿದ್ದರಿಂದ ವೆಂಟಿಲೇಟರ್ ನೆರವನ್ನು ತೆಗೆಯಲಾಗಿತ್ತು. ಆದರೆ ನಿನ್ನೆ ಮತ್ತೆ ಅವರ ಆರೋಗ್ಯ ಸ್ಥಿತಿ ಹದಗೆಟ್ಟು ತೀವ್ರ ನಿಗಾ ಘಟಕಕ್ಕೆ ದಾಖಲಾಗಿದ್ದರು.
ಲತಾ ಮಂಗೇಶ್ಕರ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಡಾ ಪ್ರತೀತ್ ಸಮ್ದನಿ, ಸಂಗೀತ ಲೋಕದ ದಂತಕಥೆ ಲತಾ ಮಂಗೇಶ್ಕರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ 8 ಗಂಟೆ 12 ನಿಮಿಷಕ್ಕೆ ನಿಧನ ಹೊಂದಿದರು. ಕೋವಿಡ್ ಸೋಂಕಿಗೆ ತುತ್ತಾಗಿ ಜನವರಿ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿ 28 ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಡಿ ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದಾರೆ ಎಂದು ಇಂದು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.