Connect with us

BANTWAL

ಈದ್ ಮಿಲಾದ್ ಹಬ್ಬ- ಬಂಟ್ವಾಳ ಗ್ರಾಮಾಂತರದಲ್ಲಿ ಶಾಂತಿ ಸಭೆ..!

ಈದ್ ಮಿಲಾದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಡೆಯಿತು.

ಬಂಟ್ವಾಳ: ಈದ್ ಮಿಲಾದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಡೆಯಿತು.

ಬಂಟ್ವಾಳದಲ್ಲಿ ಪೋಲೀಸ್ ಮತ್ತು ಸಾರ್ವಜನಿಕರ ನಡುವೆ ಉತ್ತಮ ಬಾಂಧವ್ಯ ಹೊಂದಿದ್ದಾರೆ.

ಹಾಗಾಗಿ ಈದ್ ಮಿಲಾದ್ ಜತೆಗೆ ಇತರ ಯಾವುದೇ ಹಬ್ಬ ಮತ್ತು ಕಾರ್ಯಕ್ರಮಗಳು ಶಾಂತಿಯುತವಾಗಿ ನಡೆಯಬೇಕು. ಯಾವುದೇ ಗೊಂದಲಕ್ಕೆ ಅವಕಾಶ ನೀಡಬೇಡಿ.

ಹಬ್ಬಹರಿದಿನಗಳ ಸಂದರ್ಭದಲ್ಲಿ ಹುಚ್ಚು ಸಾಹಸದ ಚಾಲನೆ ಮಾಡಿ ಅನಾಹುತಕ್ಕೆ ಕಾರಣವಾಗಿರುವ ಅನೇಕ ಘಟನೆಗಳು ನಡೆದಿದೆ.

ದ್ವಿಚಕ್ರ ವಾಹನದಲ್ಲಿ ರೈಡಿಂಗ್ ಮಾಡುವ ಯುವಕರಿಗೆ ಬುದ್ದಿ ಹೇಳಿ ಎಂದು ಸಂಘಟಕರಿಗೆ ತಿಳಿಸಿದರು.

ಗಾಂಜಾ – ಡ್ರಗ್ಸ್ ಸಹಿಸಲ್ಲ :

ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಲವು ಕಡೆಗಳಲ್ಲಿ ಗಾಂಜಾ ಸೇವನೆ ಮಾಡುವ ಮಾಹಿತಿ ಲಭ್ಯವಾಗಿದೆ.

ಅದರ ಜೊತೆಗೆ ಸಾರ್ವಜನಿಕರಿಗೆ ತೊಂದರೆ ನೀಡುವುದು,ಗಾಂಜಾ ಮಾರಾಟ, ಗಾಂಜಾ ಸೇವನೆ ಇಂತಹ ಯಾವುದೇ ಪ್ರಕರಣಗಳು ಕಂಡು ಬಂದರೆ ಪೋಲೀಸ್ ಇಲಾಖೆ ಕಠಿಣ ಕ್ರಮಕೈಗೊಳ್ಳುತ್ತದೆ.

ಗಾಂಜಾ ಪ್ರಕರಣ ಸಮಾಜದ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ. ಹಾಗಾಗಿ ಪೋಷಕರು ಹೆಚ್ಚಿನ ಜಾಗೃತೆ ವಹಿಸಿ, ಗ್ರಾಮೀಣ ಭಾಗದಲ್ಲಿ ಅಥವಾ ಯಾವುದೇ ಭಾಗದಲ್ಲಿ ಕಂಡು ಬಂದರೆ ಪೋಲೀಸರಿಗೆ ಮಾಹಿತಿ ನೀಡಿ. ಸಮಾಜದ ಸ್ವಾಸ್ಥ್ಯ ವನ್ನು ಕಾಪಾಡಲು ಸಹಕಾರ ನೀಡಿ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಮಾಂತರ ಎಸ್. ಐ.ರಾಮಕೃಷ್ಣ, ಅಪರಾಧ ವಿಭಾಗದ ಎಸ್.ಐ.ಮೂರ್ತಿ ಉಪಸ್ಥಿತರಿದ್ದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *