Connect with us

LATEST NEWS

ನಿಷ್ಪಕ್ಷಪಾತ ಹಾಗೂ ನ್ಯಾಯ ಸಮ್ಮತ ಚುನಾವಣೆಗೆ ಮುಂದಾಗಿ – ಮುಖೇಶ್ ತಾರಾಚಂದ್ ಥಕ್ವಾನಿ

ಉಡುಪಿ, ಏಪ್ರಿಲ್ 14 : ವಿಧಾನಸಭಾ ಚುನಾವಣೆಯು ನಿಷ್ಪಕ್ಷಪಾತ ಮತ್ತು ನ್ಯಾಯ ಸಮ್ಮತವಾಗಿ ನಡೆಯುವಂತೆ ಅಧಿಕಾರಿಗಳು ಚುನಾವಣಾ ಆಯೋಗ ಸೂಚಿಸುವ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದು ಭಾರತೀಯ ಕಂದಾಯ ಸೇವೆಯ ಅಧಿಕಾರಿ ಹಾಗೂ ವೆಚ್ಚ ವೀಕ್ಷಕರಾದ ಮುಖೇಶ್ ತಾರಾಚಂದ್ ಥಕ್ವಾನಿ ಅವರು ತಿಳಿಸಿದರು. ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವೆಚ್ಚ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಚುನಾವಣೆಗೆ ಸ್ಪರ್ಧಿಸುವ ಪ್ರತಿಯೊಬ್ಬ ಅಭ್ಯರ್ಥಿಗಳ ಚುನಾವಣಾ ವೆಚ್ಚದ ಬಗ್ಗೆ ನಿಗಾ ವಹಿಸಬೇಕು, ರಾಜ್ಯ ಚುನಾವಣಾ ಆಯೋಗ ಈ ಸಂಬಂದ ನೀಡಿರುವ ನಿರ್ದೇಶನಗಳನ್ನು ಪಾಲಿಸುವುದರೊಂದಿಗೆ ವೆಚ್ಚ ನಿರ್ವಹಣೆಯ ಬಗ್ಗೆ ಗಮನಹರಿಸಬೇಕು ಎಂದರು.
ಅಭ್ಯರ್ಥಿಗಳು ಮಾಧ್ಯಮಗಳಲ್ಲಿ ನೀಡುವ ಜಾಹೀರಾತುಗಳು ಜೊತೆಗೆ ಸಾಮಾಜಕ ಜಾಲತಾಣಗಳಲ್ಲಿನ ಜಾಹೀರಾತುಗಳು ಸೇರಿದಂತೆ , ಕಾಸಿಗಾಗಿ ಸುದ್ದಿಗಳ ಬಗ್ಗೆಯೂ ನಿಗಾವಹಿಸಿ ಅದರ ಖರ್ಚು ವೆಚ್ಚ ಬಗ್ಗೆ ವೆಚ್ಚ ಪರಿಶೀಲನಾ ಸಮಿತಿಗೆ ನೀಡಬೇಕು ಎಂದರು.
ಭಾರತೀಯ ಕಂದಾಯ ಸೇವೆಯ ಅಧಿಕಾರಿ ಹಾಗೂ ವೆಚ್ಚ ವೀಕ್ಷಕರಾದ ಅಂಕಿತ್ ಸೋಮನಿ ಮಾತನಾಡಿ, ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳು ನಿಯಮಗಳನ್ನು ಸರಿಯಾಗಿ ಅರಿತು ಒಂದು ತಂಡದ ರೂಪದಲ್ಲಿ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿದಾಗ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಲು ಸಾಧ್ಯವಾಗುತ್ತದೆ ಎಂದರು.


ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ಜಿಲ್ಲೆಯಲ್ಲಿ ನ್ಯಾಯ ಸಮ್ಮತ ಚುನಾವಣೆ ನಡೆಸಲು ವಿವಿದ ತಂಡಗಳನ್ನು ಚುನಾವಣಾ ಆಯೋಗದ ನಿರ್ದೇಶನದಂತೆ ನೇಮಿಸಲಾಗಿದ್ದು, ಈಗಾಗಲೇ ಎಲ್ಲಾ ತಂಡಗಳೂ ತಮ್ಮ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿವೆ ಎಂದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *