LATEST NEWS
ಕುಂದಾಪುರದಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆ

ಕುಂದಾಪುರದಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆ
ಬೆಂಗಳೂರು ಎಪ್ರಿಲ್ 8: ಕರ್ನಾಟಕ ವಿಧಾನ ಸಭೆಯ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಕುಂದಾಪುರದಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗುವ ಮೂಲಕ ಇತ್ತೀಚೆಗೆ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಬಿಜೆಪಿ ಟಿಕೆಟ್ ಸಾದ್ಯತೆ ಇಲ್ಲ ಎನ್ನುವ ಸುದ್ದಿ ಈಗ ಸುಳ್ಳಾಗಿದೆ.
ಇಂದು ಬಿಡುಗಡೆಯಾದ ಪ್ರಥಮ ಪಟ್ಟಿಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಒಂದು ಸ್ಥಾನಕ್ಕೆ ಮಾತ್ರ ಅಭ್ಯರ್ಥಿ ಅಂತಿಮವಾಗಿದ್ದು ಸುಳ್ಯದಲ್ಲಿ ಹಾಲಿ ಶಾಸಕ ಎಸ್. ಅಂಗಾರ ಅವರ ಹೆಸರು ಅಂತಿಮವಾಗಿದೆ. ದಕ್ಷಿಣಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಕೇವಲ ಒಂದು ಸ್ಥಾನಕ್ಕೆ ಮಾತ್ರ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮಗೊಳಿಸಿದೆ. ಉಳಿದ 7 ಕ್ಷೇತ್ರಗಳಲ್ಲಿ ಅಭ್ಯರ್ಥಿಯನ್ನು ಘೋಷಿಸದೆ ಕುತೂಹಲ ಹಾಗೆ ಉಳಿಸಿದೆ.

ಈ ನಡುವೆ ಉಡುಪಿ ಜಿಲ್ಲೆಯ 5 ವಿಧಾನಸಭೆ ಕ್ಷೇತ್ರಗಳಲ್ಲಿ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮಗೊಳಿಸಿದೆ. ಅದರಲ್ಲಿ ಇತ್ತೀಚೆಗೆ ಬಿಜೆಪಿ ಸೇರಿದ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಕುಂದಾಪುರದಿಂದ ಕಣಕ್ಕಿಳಿಯಲಿದ್ದು, ಕಾರ್ಕಳದ ಹಾಲಿ ಶಾಸಕ ಸುನಿಲ್ ಕುಮಾರ್ ಕಾರ್ಕಳ ವಿಧಾನಸಭೆ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.
ಬಿಜೆಪಿ ಬಿಡುಗಡೆ ಮಾಡಿರುವ ಮೊದಲ ಪಟ್ಟಿ