Connect with us

LATEST NEWS

ಎಲೆಕ್ಟ್ರಿಕ್ ವೆಹಿಕಲ್ ಶೋ ರೂಂನಲ್ಲಿ ಬೆಂಕಿ ಅನಾಹುತ -8 ಮಂದಿ ಸಾವು

ಹೈದರಾಬಾದ್ ಸೆಪ್ಟೆಂಬರ್ 13: ಎಲೆಕ್ಟ್ರಿಕ್ ವಾಹನಗಳಿಂದಾಗುತ್ತಿರುವ ಬೆಂಕಿ ಅನಾಹುತಗಳ ದಿನದಿಂದ ದಿನ್ಕಕೆ ಹೆಚ್ಚಾಗುತ್ತಿದ್ದು. ಇದೀಗ ಎಲೆಕ್ಟ್ರಿಕ್ ವಾಹನಗಳಿಂದ ಶೋರೂಂ ನಲ್ಲಿ ಅಗ್ನಿ ಅನಾಹುತದಿಂದ 8 ಮಂದಿ ಸಾವನಪ್ಪಿರುವ ಘಟನೆ ಸಿಕಂದರಬಾದ್ ನ ರೂಬಿ ಹೋಟೆಲ್​​ನಲ್ಲಿ ನಡೆದಿದೆ.


ಅಗ್ನಿ ದುರಂತದಲ್ಲಿ ಮಹಿಳೆ ಸೇರಿದಂತೆ 8 ಜನರು ಮೃತಪಟ್ಟಿದ್ದು 10 ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಗಾಂಧಿ ಆಸ್ಪತ್ರೆ ಮತ್ತು ಇತರ ಹತ್ತಿರದ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಟ್ಟಡದ ಗ್ರೌಂಡ್​​ ಫ್ಲೋರ್​​ನಲ್ಲಿನ ಎಲೆಕ್ಟ್ರಿಕ್ ವೆಹಿಕಲ್ ಶೋರೂಂನಲ್ಲಿ ಬ್ಯಾಟರಿ ಸ್ಫೋಟಗೊಂಡು ಇಡೀ ಕಟ್ಟಡಕ್ಕೆ ಬೆಂಕಿ ವ್ಯಾಪಿಸಿದೆ. ಈ ಪರಿಣಾಮ ಕಟ್ಟಡದ ಮೇಲಿನ ಮಹಡಿಯಲ್ಲಿದ್ದ ಹೋಟೆಲ್​​ನಲ್ಲೂ ಅವಘಡ ಸಂಭವಿಸಿದೆ. ಹೋಟೆಲ್​​ನಲ್ಲಿ 25-30 ಪ್ರವಾಸಿಗರು ತಂಗಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ. ಈ ಪೈಕಿ 8 ಜನರು ಮೃತಪಟ್ಟಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ. ರಕ್ಷಣಾ ಸಿಬ್ಬಂದಿ ಹಲವರನ್ನ ಹೋಟೆಲ್​​ನಿಂದ ರಕ್ಷಿಸುವಲ್ಲಿ ಸಫಲರಾಗಿದ್ದಾರೆ. 2 ಅಗ್ನಿಶಾಮಕ ವಾಹನಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿವೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *