LATEST NEWS
ದೆಹಲಿ – ಮಳೆ ಅಬ್ಬರಕ್ಕೆ ರೈಲ್ವೆ ನಿಲ್ದಾಣದಲ್ಲಿ ಕರೆಂಟ್ ಹೊಡೆದು ಮಹಿಳೆ ಸಾವು…!!

ದೆಹಲಿ ಜೂನ್ 25: ದೆಹಲಿಯಲ್ಲಿ ಮುಂಗಾರು ಮಳೆ ಅಬ್ಬರ ಜೊರಾಗಿದ್ದು, ಹಲವು ಪ್ರದೇಶಗಳಲ್ಲಿ ಕೃತಕ ನೆರೆ ಬಂದಿದೆ. ಈ ನಡುವೆ ಮಳೆಯಲ್ಲಿ ಮಹಿಳೆಯೊಬ್ಬರು ರೈಲ್ವೆ ನಿಲ್ದಾಣದಲ್ಲಿದ್ದ ಕರೆಂಟ್ ಕಂಬ ಮುಟ್ಟಿದ ಹಿನ್ನಲೆ ಕರೆಂಟ್ ಪ್ರವಹಿಸಿ ಸಾವನಪ್ಪಿದ್ದಾರೆ.
ಪೂರ್ವ ದಿಲ್ಲಿಯ ಪ್ರೀತ್ ವಿಹಾರ್ ನಿವಾಸಿ ಸಾಕ್ಷಿ ಅಹುಜಾ ಮೃತಪಟ್ಟ ಮಹಿಳೆ. ಅವರು ಇಬ್ಬರು ಮಹಿಳೆಯರು ಮತ್ತು ಮೂವರು ಮಕ್ಕಳೊಂದಿಗೆ ಬೆಳಿಗ್ಗೆ 5:30 ರ ಸುಮಾರಿಗೆ ರೈಲು ನಿಲ್ದಾಣಕ್ಕೆ ಬಂದರು. ಮಹಿಳೆಯು ಕೊಚ್ಚೆಗುಂಡಿಗಳನ್ನು ತಪ್ಪಿಸಲು ವಿದ್ಯುತ್ ಕಂಬವನ್ನು ಹಿಡಿದಾಗ ಭಾರೀ ಪ್ರಮಾಣದ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾರೆ. ಜೀವ ಉಳಿಸುವ ಪ್ರಯತ್ನದಲ್ಲಿ ದಾರಿಹೋಕರು ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
