DAKSHINA KANNADA
ಕಡಬ – ವ್ಯಕ್ತಿ ಮೇಲೆ ಕಾಡಾನೆ ದಾಳಿ – ಆಸ್ಪತ್ರೆಗೆ ದಾಖಲು
ಕಡಬ ಜನವರಿ 26: ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಂಡ ಘಟನೆ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಬಳಕ್ಕ ಎಂಬಲ್ಲಿ ನಡೆದಿದೆ. ಇಲ್ಲಿನ ಅರಣ್ಯ ಪ್ರದೇಶದಲ್ಲಿ ನೆಡುತೋಪಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಠಾತ್ತನೆ ಕಾಡಾನೆಯೊಂದು ದಾಳಿ ನಡೆಸಿದ್ದು ವ್ಯಕ್ತಿಯೊಬ್ಬರ ತಲೆ ಮತ್ತು ಸೊಂಟಕ್ಕೆ ಗಂಭೀರ ಗಾಯವಾಗಿದೆ.
ಗಾಯಗೊಂಡ ವ್ಯಕ್ತಿಯನ್ನು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ರೇವಪ್ಪ ಎಂದು ಗುರುತಿಸಲಾಗಿದೆ. ಇವರು ಅರಣ್ಯ ಇಲಾಖೆಯಲ್ಲಿ ನೆಡುತೋಪುಗಳಲ್ಲಿ ಗಿಡ ನೆಡುವ ಕೆಲಸ ಮಾಡುತ್ತಿದ್ದರು. ಸ್ಥಳಕ್ಕೆ ಅರಣ್ಯ ಸಿಬ್ಬಂದಿಗಳು, ಗ್ರಾಮ ಪಂಚಾಯತ್ ಸದಸ್ಯರುಗಳು ಆಗಮಿಸಿದ್ದು, ತಕ್ಷಣ ಗಾಯಗೊಂಡ ವ್ಯಕ್ತಿಯನ್ನು ಆಂಬ್ಯುಲೆನ್ಸ್ ಮೂಲಕ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ,ಹೆಚ್ಚಿನ ಚಿಕಿತ್ಸೆಯ ಸಲುವಾಗಿ ಪುತ್ತೂರಿಗೆ ಕರೆದುಕೊಂಡು ಹೋಗಲಾಗಿದೆ.
You must be logged in to post a comment Login