Connect with us

    KARNATAKA

    ಚಲಿಸುತ್ತಿದ್ದ ಓಮ್ನಿ ಕಾರಿನ ಮೇಲೆ ದಾಳಿ ಮಾಡಿದ ಒಂಟಿ ಸಲಗ – ಒರ್ವ ಗಂಭೀರ

    ಚಿಕ್ಕಮಗಳೂರು ಅಗಸ್ಟ್ 16: ಚಲಿಸುತ್ತಿದ್ದ ಓಮ್ನಿ ಕಾರಿನ ಮೇಲೆ ಒಂಟಿ ಸಲಗ ದಾಳಿ ಮಾಡಿರುವ ಘಟನವೆ ಮೂಡಿಗೆರೆ ತಾಲೂಕಿನ ಕಂದೂರು ಸಾರಗೋಡು-ಸಮೀಪದ ಭೈರೇಗುಡ್ಡ ಕ್ರಾಸ್ ಬಳಿ ನಡೆದಿದೆ. ಈ ಘಟನೆಯಲ್ಲಿ ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ.

    ಚಿಕ್ಕಮಗಳೂರು ತಾಲೂಕಿನ ಜೋಳದಾಳು ಗ್ರಾಮದ ನಾಲ್ವರು ಓಮ್ನಿಯಲ್ಲಿ ಹೊರನಾಡಿಗೆ ಹೋಗುವಾಗ ಭೈರೇಗುಡ್ಡ ಕ್ರಾಸ್ ಬಳಿ ಏಕಾಏಕಿ ಅಡ್ಡ ಬಂದ ಒಂಟಿ ಸಲಗ ದಾಳಿ ಮಾಡಿದೆ. ಕಾರಿನಲ್ಲಿದ್ದ ನಾಲ್ವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದರೆ, ಮೂವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಒಂಟಿ ಸಲಗ ದಾಳಿ ಮಾಡುತ್ತಿದ್ದಂತೆ ಕಾರಿನಲ್ಲಿದ್ದವರು ಕಾರಿನಿಂದ ಇಳಿದು ಓಡಿ ಹೋಗಿದ್ದಾರೆ.


    ಬಳಿಕ ಒಂಟಿ ಸಲಗ ಓಮಿನಿ ಕಾರಿನ ಮೇಲೆ ಮನಸ್ಸೋ ಇಚ್ಛೆ ದಾಳಿ ಮಾಡಿದ್ದು, ಓಮ್ನಿ ಬಹುತೇಕ ಜಖಂಗೊಂಡಿದೆ. ಗಾಯಾಳುಗಳನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply