KARNATAKA
ಅವಳಿ ಮರಿಗಳಿಗೆ ಜನ್ಮ ನೀಡಿದ ಆನೆ – ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಅಪರೂಪದ ವಿದ್ಯಮಾನ
ಬಂಡೀಪುರ – ಆನೆಯೊಂದು ಅವಳಿ ಮರಿಗಳಿಗೆ ಜನ್ಮ ನೀಡಿರುವ ಅಪರೂಪದ ವಿದ್ಯಮಾನ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ನಡೆದಿದ್ದು, ಇದೀಗ ಅವಳಿ ಮರಿ ಆನೆಗಳ ಜೊತೆ ತಾಯಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸಾಮಾನ್ಯವಾಗಿ ಆನೆಗಳು ಕೇವಲ ಒಂದು ಮರಿಗಳಿಗೆ ಜನ್ಮ ನೀಡುತ್ತವೆ. ಅವಳಿ ಮರಿಗಳಿಗೆ ಜನ್ಮ ನೀಡುವುದು ಅಪರೂಪವಾಗಿದ್ದು, ಬಂಡೀಪುರ ಅರಣ್ಯದಲ್ಲಿ ಇದೇ ಪ್ರಥಮ ಎಂದು ಹೇಳಲಾಗುತ್ತಿದೆ. ಈ ನಡುವೆ ಪರಿಸರ ಸಂರಕ್ಷಣಾವಾದಿಗಳು, ಮರಿ ಆನೆಗಳ ಆರೋಗ್ಯ ಹಾಗೂ ಅವುಗಳ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮಿಸಬೇಕೆಂದು ಸಲಹೆ ನೀಡಿದ್ದಾರೆ.
ಅವಳಿ ಮರಿ ಆನೆಗಳ ಜೊತೆ ತಾಯಿ ತಿರುಗಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
You must be logged in to post a comment Login