LATEST NEWS
ಹಿರಿಯ ವಕೀಲ ಮಾಜಿ ಸಾಲಿಸಿಟರ್ ಜನರಲ್ ಫಾಲಿ ಎಸ್ ನಾರಿಮನ್ ನಿಧನ
ನವದೆಹಲಿ ಫೆಬ್ರವರಿ 21 : ದೇಶದ ಖ್ಯಾತ ಹಿರಿಯ ವಕೀಲ ಮಾಜಿ ಸಾಲಿಸಿಟರ್ ಜನರಲ್ ಫಾಲಿ ಎಸ್ ನಾರಿಮನ್ (95) ಅವರು ಬುಧವಾರ ಬೆಳಗ್ಗೆ ನವದೆಹಲಿಯಲ್ಲಿ ನಿಧನರಾದರು.
70 ವರ್ಷಕ್ಕೂ ಹೆಚ್ಚಿನ ಕಾಲ ವಕೀಲಿಕೆ ಮಾಡಿದ್ದ ಅವರು, ದೇಶದ ಪ್ರಮುಖ ವಕೀಲರಲ್ಲಿ ಓರ್ವರಾಗಿದ್ದರು. 1950ರಲ್ಲಿ ಬಾಂಬೆ ಹೈಕೋರ್ಟ್‌ನಲ್ಲಿ ವಕೀಲಿಕೆ ಆರಂಭಿಸಿದ್ದ ಅವರು, 1972ರಲ್ಲಿ ದೇಶದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿಯೂ ಕಾರ್ಯನಿರ್ವಹಿಸಿದ್ದರು. ಅವರು 70 ವರ್ಷಗಳಿಗೂ ಹೆಚ್ಚು ಕಾಲ ಕಾನೂನು ಅಭ್ಯಾಸ ಮಾಡಿದ್ದಾರೆ.
ಆರಂಭದಲ್ಲಿ ಬಾಂಬೆ ಹೈಕೋರ್ಟ್‌ನಲ್ಲಿ ಮತ್ತು 1972ರಿಂದ ದೆಹಲಿಯಲ್ಲಿ ಸುಪ್ರೀಂಕೋರ್ಟ್‌ನಲ್ಲಿ ವಕೀಲ ವೃತ್ತಿ ಆರಂಭಿಸಿದ್ದರು. ಮುಂಬೈಯಿಂದ 1972ರ ಮೇನಲ್ಲಿ ದೆಹಲಿಗೆ ಸ್ಥಳಾಂತರಗೊಂಡ ಬಳಿಕ ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ನೇಮಕಗೊಂಡರು.
ಜಲವಿವಾದಗಳಲ್ಲಿ ಕರ್ನಾಟಕದ ಪರವಾಗಿ ಸಮರ್ಥ ವಾದ ಮಂಡಿಸಿ ಹಲವು ವ್ಯಾಜ್ಯಗಳಲ್ಲಿ ಜಯ ತಂದು ಕೊಟ್ಟಿದ್ದರು.