Connect with us

LATEST NEWS

ಕಾಶ್ಮೀರದಲ್ಲಿ ಎನ್‌ಕೌಂಟರ್: ಮೂವರು ಉಗ್ರರ ಹತ್ಯೆ, ಮುಂದುವರಿದ ಕಾರ್ಯಾಚರಣೆ

ಶ್ರೀನಗರ, ಮೇ 06: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆ ಮೂವರು ಉಗ್ರರನ್ನು ಹೊಡೆದುರುಳಿಸಿದೆ.

‘ದಕ್ಷಿಣ ಕಾಶ್ಮೀರದ ಕನಿಗಾಮ್ ಪ್ರದೇಶದಲ್ಲಿ ಎನ್‌ಕೌಂಟರ್‌ ನಡೆದಿದೆ. ಈ ವೇಳೆ ಮೂವರು ಉಗ್ರರು ಹತರಾಗಿದ್ದಾರೆ. ಉಗ್ರ ಸಂಘಟನೆಯ ಸದಸ್ಯ ತೌಫಿಕ್ ಅಹಮದ್ ಶರಣಾಗಿದ್ದಾನೆ. ಆತನನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ಘಟನಾ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.