FILM
ಇಡಿ ಯಿಂದ ಐಶ್ವರ್ಯ ರೈಗೆ ವಿಚಾರಣೆಗೆ ಹಾಜರಾಗಲು ಸಮನ್ಸ್
ಮಂಬೈ : ಪನಾಮಾ ಪೇಪರ್ಸ್ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಸೋಮವಾರ ಸಮನ್ಸ್ ನೀಡಿದೆ.
ಇ.ಡಿ ಸಮನ್ಸ್ ಬಂದಿರುವ ಹಿನ್ನೆಲೆ ನಟಿ ಐಶ್ವರ್ಯಾ ರೈ ಅವರು ಇಂದು ಇ.ಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದ್ದು, ವಿದೇಶದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಕೂಡಿಟ್ಟ ಆರೋಪದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಐಶ್ವರ್ಯಾ ರೈ ಅವರನ್ನು ಪ್ರಶ್ನಿಸುವ ಸಾಧ್ಯತೆ ಇದೆ.
ಬಾಲಿವುಡ್ ನಟಿ ಐಶ್ವರ್ಯಾ ರೈ ಅವರನ್ನು ಈ ಹಿಂದೆಯೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಆದರೆ ಈ ಹಿಂದೆ ಎರಡು ಬಾರಿ ಐಶ್ವರ್ಯಾ ರೈ ಅವರು ವಿಚಾರಣೆಗೆ ಕಾಲವಕಾಶ ಕೋರಿ ಸಮಯ ಮುಂದೂಡಿದ್ದರು.
ಇದೀಗ ಮತ್ತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದು, ಈ ಬಾರಿ ಐಶ್ವರ್ಯಾ ರೈ ಅವರು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.