Connect with us

KARNATAKA

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ

ಬೆಂಗಳೂರು, ಜನವರಿ 05 : ವಿಧಾನ ಸಭೆಯಲ್ಲಿ ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಗೋಹತ್ಯೆ ನಿಷೇಧ ಕಾನೂನು ಮಸೂದೆ ಅಂಗೀಕಾರ ಮಾಡಲಾಗಿತ್ತು. ಈ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿತ್ತು. ಇದೀಗ ಇಂತಹ ಕಾನೂನಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.ರಾಜ್ಯದಲ್ಲಿ ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಗೋಹತ್ಯೆ ನಿಷೇಧ ಕಾಯ್ದೆ ವಿಧಾನಸಭೆಯಲ್ಲಿ ಅಂಗೀಕರಿಸಲ್ಪಟ್ಟ ನಂತ್ರ, ವಿಧಾನ ಪರಿಷತ್ ನಲ್ಲಿ ಅಂಗೀಕಾರಕ್ಕೂ ಮುನ್ನಾ ಅನಿರ್ಧಿಷ್ಠಾವಧಿಗೆ ಮುಂದೂಡಲಾಗಿತ್ತು.

ಇಂತಹ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರುವುದಕ್ಕೆ ಸಿಎಂ ಯಡಿಯೂರಪ್ಪ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿತ್ತು. ಈ ಮಸೂದೆಯನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿ ಕೊಡಲಾಗಿತ್ತು. ಇದೀಗ ರಾಜ್ಯಪಾಲರು ಗೋಹತ್ಯೆ ನಿಷೇಧ ಕಾನೂನ ಸುಗ್ರೀವಾಜ್ಞೆ ಕಾಯ್ದೆಗೆ ಸಹಿ ಹಾಕಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಂಡಿದೆ. ಇನ್ಮುಂದೆ ಗೋಹತ್ಯೆ ನಿಷೇಧಗೊಂಡಂತೆ ಆಗಿದೆ.