KARNATAKA
ಹಳೇ ಪ್ರಿಯಕರನ ಕಾಟಕ್ಕೆ ಬೇಸತ್ತು ನಿಶ್ಚಿತಾರ್ಥಗೊಂಡ ಯುವತಿ ಜೀವಾಂತ್ಯ..!
ಬೆಂಗಳೂರು: ನೆರೆಮನೆ ಹುಡುಗನ ಪ್ರೀತಿಯಲ್ಲಿ ಬಿದ್ದಿದ್ದ ಯುವತಿಗೆ ಬೇರೊಬ್ಬ ಹುಡುಗನ ಜೊತೆ ನಿಶ್ಚಿತಾರ್ಥವಾಗಿದ್ದು, ಹಳೇ ಲವರ್ ನ ಕಾಟ ತಾಳಲಾರದೆ ಯುವತಿ ನೇಣಿಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರು ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯ ಗೊಟ್ಟಿಗೆರೆ ಗ್ರಾಮದಲ್ಲಿ ವಾಸವಿದ್ದ ಚಂದ್ರಕಲಾ (19) ನೇಣಿಗೆ ಶರಣಾದ ಯುವತಿಯಾಗಿದ್ದಾಳೆ.ಪಿಯುಸಿ ವಿದ್ಯಾಭ್ಯಾಸ ಮುಗಿಸಿ ಮನೆಯಲ್ಲಿಯೇ ಇದ್ದ ಚಂದ್ರಕಲಾ ಪಕ್ಕದ ಮನೆಯ ಅರುಣ್ ಕುಮಾರ್ ನ ಜೊತೆಗೆ ಪ್ರೀತಿಯಲ್ಲಿ ಬಿದ್ದಿದ್ದಳು. ಹುಡುಗಿ ಮನೆಯವರಿಗೆ ವಿಷಯ ಗೊತ್ತಾಗಿ ಹುಡುಗಿಗೆ ಬುದ್ಧಿವಾದ ಹೇಳಿದ್ದರು. ಆ ಹುಡುಗ ಜೈಲಿಗೆ ಹೋಗಿ ಬಂದಿದ್ದು ವ್ಯಕ್ತಿತ್ವ ಸರಿ ಇಲ್ಲ ಎಂದು ಮನವೊಲಿಸಿ ಕನಕಪುರದ ಪರಿಚಿತರ ಸಂಬಂಧದಲ್ಲಿ ಹುಡುಗನನ್ನು ನೋಡಿ ಇತ್ತೀಚೆಗಷ್ಟೇ ನಿಶ್ಚಿತಾರ್ಥ ಮಾಡಿದ್ದರು. ಆದರೆ ಜಿಗಣೆ ಬಳಿಯ ನಂಜಾಪುರದ ನೆಂಟರ ಮನೆಗೆ ಹೋಗಿದ್ದ ಚಂದ್ರಕಲಾ ಅಲ್ಲೇ ನೇಣೀಗೆ ಶರಣಾಗಿದ್ದಾಳೆ. ಬೇರೆ ಮದುವೆಯಾದರೆ ಕೊಲೆ ಮಾಡುವುದಾಗಿ ಪ್ರಿಯಕರ ಅರುಣ್ ಕುಮಾರ್ ನಮ್ಮ ಮಗಳಿಗೆ ಬೆದರಿಕೆ ಹಾಕುತ್ತಿದ್ದ, ಮಗಳ ಸಾವಿಗೆ ಆತನೇ ಕಾರಣವೆಂದು ಪೊಲೀಸ್ ಠಾಣೆಯಲ್ಲಿ ದೂರು ಯುವತಿ ಪಾಲಕರು ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
You must be logged in to post a comment Login