LATEST NEWS
ದೇಗುಲಗಳ ನಿರ್ಮಾಣದಲ್ಲಿ ಹೆಸರು ಮಾಡಿದ್ದ ಬ್ರಹ್ಮಾವರ ಮೂಲದ ಇಂಜಿನಿಯರ್ ಗಂಗಾವತಿಯಲ್ಲಿ ಆತ್ಮಹತ್ಯೆ

ಗಂಗಾವತಿ ಫೆಬ್ರವರಿ 14: ದೇಗುಲಗಳ ನಿರ್ಮಾಣದಲ್ಲಿ ಹೆಸರು ಮಾಡಿದ್ದ ಉಡುಪಿ ಜಿಲ್ಲೆಯ ಬ್ರಹ್ಮಾವರದ ಎಂ.ಕೆ.ಟೆಂಪಲ್ ಕನ್ಸ್ಟ್ರಕ್ಷನ್ ಮಾಲೀಕ, ಯುವ ಇಂಜಿನಿಯರ್ ಗಂಗಾವತಿಯ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರನ್ನು ಬ್ರಹ್ಮಾವರದ ವಿನಯ್ ಕುಮಾರ್ (38) ಎಂದು ಗುರುತಿಸಲಾಗಿದೆ. ನಗರದ ಕನಕಗಿರಿ ರಸ್ತೆಯಲ್ಲಿರುವ ಕೃಷಿ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರ ಸಮೀಪದಲ್ಲಿ ಬಾಡಿಗೆ ಮನೆಯಲ್ಲಿ ಇವರು ವಾಸವಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವಿನಯ್ ಡೆತ್ ನೋಟ್ ಬರೆದಿಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಂಗಾವತಿಯ ಸರ್ಕಾರಿ ಉಪವಿಭಾಗ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಬ್ರಹ್ಮಾವರದಲ್ಲಿ ಅಂತ್ಯಸಂಸ್ಕಾರ ಮಾಡಲಾಗುವುದು ಎಂದು ಮೃತನ ಸಂಬಂಧಿಕರು ತಿಳಿಸಿದ್ದಾರೆ.
