KARNATAKA
ನಾಳೆಯಿಂದ ಮಾರ್ಚ್ 31 ರವರೆಗೆ ಇಡೀ ಕರ್ನಾಟಕ ಲಾಕ್ ಡೌನ್
ನಾಳೆಯಿಂದ ಮಾರ್ಚ್ 31 ರವರೆಗೆ ಇಡೀ ಕರ್ನಾಟಕ ಲಾಕ್ ಡೌನ್
ಮಂಗಳೂರು ಮಾರ್ಚ್ 23: ಕರ್ನಾಟಕದಲ್ಲಿ ಕರೋನಾ ವೈರಸ್ ಪತ್ತೆಯಾದ 9 ಜಿಲ್ಲೆಗಳಿಗೆ ಅನ್ವಯಿಸಲಾಗಿದ್ದ ಲಾಕ್ ಡೌನ್ ನಿರ್ಬಂಧವನ್ನು ಇಡೀ ರಾಜ್ಯಕ್ಕೆ ವಿಸ್ತರಿಸಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆದೇಶಿಸಿದ್ದಾರೆ.
ಕೊರೋನಾ ವೈರಸ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಹಾಗೂ ಕರೋನ ಸೋಂಕು ಹರಡುವ ಪರಿಸ್ಥಿತಿಯ ಗಂಭೀರತೆಯನ್ನು ಅರಿತು, ಈ ಹಿಂದೆ 9 ಜಿಲ್ಲೆಗಳಿಗೆ ಮಾತ್ರ ಅನ್ವಯಿಸಲಾಗಿದ್ದ ನಿರ್ಬಂಧವನ್ನು ಇಡೀ ರಾಜ್ಯಕ್ಕೆ ವಿಸ್ತರಿಸಲಾಗಿದೆ. ನಾಳೆಯಿಂದ ಮಾರ್ಚ್ 31 ರವರೆಗೆ ಈ ನಿರ್ಬಂಧ ಜಾರಿಯಲ್ಲಿರಲಿದೆ ಎಂದು ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಅಪಾಯಕಾರಿ ಮಟ್ಟದಲ್ಲಿ ಹರಡುತ್ತಿರುವ #ಕೋವಿಡ್_19 ಸೋಂಕನ್ನು ನಿಯಂತ್ರಿಸುವ ದೃಷ್ಟಿಯಿಂದ 9 ಜಿಲ್ಲೆಗಳಿಗೆ ಅನ್ವಯಿಸಿ 24 /03 /2020 ರಿಂದ 31 /03/2020 ರವರೆಗೆ ಹೊರಡಿಸಿದ್ದ ಸಂಪೂರ್ಣ ಲಾಕ್ ಡೌನ್ ಆದೇಶವನ್ನು
ರಾಜ್ಯಾದ್ಯಂತ ವಿಸ್ತರಿಸಲಾಗಿದೆ .ಸರ್ಕಾರದ ಈ ನಿರ್ಧಾರವನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಲು ಕೋರಲಾಗಿದೆ.
— CM of Karnataka (@CMofKarnataka) March 23, 2020
ಅಲ್ಲದೆ ಜನರು ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗಬಾರದು. ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಲಾಗುವುದು ಟ್ವಿಟ್ ಮೂಲಕ ತಿಳಿಸಿದ್ದಾರೆ.
ಈಗಾಗಲೇ ಕರ್ನಾಟಕದಲ್ಲಿ ಬೆಂಗಳೂರು ಒಂದರಲ್ಲೇ 23 ಪ್ರಕರಣಗಳು ಪತ್ತೆಯಾಗಿದೆ. ಕಲಬುರಗಿ 3, ಮೈಸೂರು ಮತ್ತು ಚಿಕ್ಕಬಳ್ಳಾಪುರದಲ್ಲಿ 2, ಕೊಡಗು, ಧಾರವಾಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಲಾ 1 ಪ್ರಕರಣಗಳು ದಾಖಲಾಗಿದ್ದು ಒಟ್ಟಾರೆ 33 ಪ್ರಕರಣಗಳು ದೃಢಪಟ್ಟಿವೆ.