KARNATAKA
ಖ್ಯಾತ ಉದ್ಯಮಿ ಆರ್.ಎನ್ ಶೆಟ್ಟಿ ನಿಧನ
ಕಾರವಾರ ಡಿಸೆಂಬರ್ 17: ನಾಡಿನ ಖ್ಯಾತ ಉದ್ಯಮಿ, ಶಿಕ್ಷಣ ತಜ್ಞ ಮುರುಡೇಶ್ವರ ದೇವಾಲಯಕ್ಕೆ ಹೊಸ ರೂಪ ನೀಡಿದ ಆರ್ .ಎನ್ ಶೆಟ್ಟಿ ಇಂದು ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ 1928ರ ಆಗಸ್ಟ್ 15ರಂದು ಜನಿಸಿದ ಆರ್.ಎನ್. ಶೆಟ್ಟಿ ಅವರು ಧಾರ್ಮಿಕ, ಸಾಂಸ್ಕೃತಿಕ, ಆಧ್ಯಾತ್ಮಿಕ, ವೈದ್ಯಕೀಯ, ಆತಿಥ್ಯ, ವಸತಿ, ಔದ್ಯಮಿಕ, ಔದ್ಯೋಗಿಕ, ವಾಣಿಜ್ಯ, ಶೈಕ್ಷಣಿಕ, ಮೂಲಸೌಕರ್ಯ, ವಿದ್ಯುತ್ ಹಾಗೂ ನೀರಾವರಿ ಕ್ಷೇತ್ರ ಸೇರಿದಂತೆ ವಿವಿಧ ರಂಗಗಳಲ್ಲಿ ತೊಡಗಿಸಿಕೊಂಡಿದ್ದರು.
1961ರಲ್ಲಿ ಮೂಲಸೌಕರ್ಯ ಕಂಪನಿ ಹುಟ್ಟು ಹಾಕಿದ ಆರ್.ಎನ್. ಶೆಟ್ಟಿ ಅವರು, ಹಿಡಕಲ್ ಜಲಾಶಯ, ತಟ್ಟಿಹಳ್ಳ ಜಲಾಶಯ, ಸೂಪ ಜಲಾಶಯ, ಗೇರುಸೊಪ್ಪ ಜಲಾಶಯ, ಮಾಣಿ ಅಣೆಕಟ್ಟೆ, ವಾರಾಹಿ ಜಲ ವಿದ್ಯುತ್ ಯೋಜನೆ, ಕೊಂಕಣ ರೈಲು ಸುರಂಗ, ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣವೇ ಮೊದಲಾದ ಹಲವು ಯೋಜನೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಕೋರಿ ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿ ತಮ್ಮ ಶೃದ್ದಾಂಜಲಿ ಸಲ್ಲಿಸಿದ್ದಾರೆ.