Connect with us

    DAKSHINA KANNADA

    ಸಾಮಾಜಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್: ಕಾರ್ಯಕರ್ತರ ಮುಂದೆ ಕಣ್ಣೀರಿಟ್ಟ ಮಾಜಿ ಶಾಸಕ ಸಂಜೀವ ಮಠಂದೂರು

    ಪುತ್ತೂರು, ಮೇ 18: ಸಾಮಾಜಕ ಜಾಲತಾಣದಲ್ಲಿ ಮಾಜಿ ಶಾಸಕರ ವಿರುದ್ದ ಅವಹೇಳನಕಾರಿ ಪೋಸ್ಟ್  ವಿಚಾರವಾಗಿ ಮಾಜಿ ಶಾಸಕ ಸಂಜೀವ ಮಠಂದೂರು ಕಾರ್ಯಕರ್ತರ ಮುಂದೆ ಕಣ್ಣೀರಿಟ್ಟ ಘಟನೆ ನಡೆದಿದೆ.

    ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಗೆ ಮಾತೃ ಪಕ್ಷ ಬಿಜೆಪಿಯ ಬಗ್ಗೆ ಒಲವಿದೆ ಎನ್ನುವ ಹೇಳಿಕೆಯನ್ನು ಮಾಜಿ ಶಾಸಕ ಸಂಜೀವ ಮಠಂದೂರು ನೀಡಿದ್ದರು.

    ಈ  ಹೇಳಿಕೆಯನ್ನು ಖಂಡಿಸಿ ಶಾಸಕರ ಆಪ್ತನಿಂದ ಮಠಂದೂರು ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಲಾಗಿದ್ದು, ಈ  ಪೋಸ್ಟ್ ವಿಚಾರವನ್ನು ಪುತ್ತೂರಿನ ಬಿಜೆಪಿ ಕಛೇರಿಯಲ್ಲಿ ಕಾರ್ಯಕರ್ತರ ಮುಂದೆ ಹೇಳಿಕೊಂಡ ಮಾಜಿ ಶಾಸಕ ಸಂಜೀವ ಮಠಂದೂರು ಕಣ್ಣೀರಿಟ್ಟಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply