FILM
12 ವರ್ಷಗಳ ದಾಂಪತ್ಯಕ್ಕೆ ಗುಡ್ ಬೈ ಹೇಳಿದ ಹೇಮಾಮಾಲಿನಿ ಮಗಳು ಇಶಾ ಡಿಯೋಲ್

ಮುಂಬೈ ಫೆಬ್ರವರಿ 07: ಹಿರಿಯ ನಟರಾದ ಧರ್ಮೇಂದ್ರ ಮತ್ತು ಹೇಮಾ ಮಾಲಿನಿ ಅವರ ಪುತ್ರಿ ನಟಿ ಇಶಾ ಡಿಯೋಲ್ ಮಂಗಳವಾರ ತಮ್ಮ ಪತಿ ಭರತ್ ತಖ್ತಾನಿಗೆ ಡೈವೋರ್ಸ್ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಇಬ್ಬರು ಪರಸ್ಪರ ಮತ್ತು ಸೌಹಾರ್ದಯುತವಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.
2012ರಲ್ಲಿ ಇಶಾ ಡಿಯೋಲ್ ಹಾಗೂ ಭರತ್ ತಖ್ತಾನಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು. 2017ರಲ್ಲಿ ಮಗಳು ರಾಧ್ಯಗೆ ಇಶಾ ಡಿಯೋಲ್ ಜನ್ಮ ನೀಡಿದರು. 2019ರಲ್ಲಿ ಎರಡನೇ ಮಗುವನ್ನ ಇಶಾ ಡಿಯೋಲ್ ಹಾಗೂ ಭರತ್ ತಖ್ತಾನಿ ಬರಮಾಡಿಕೊಂಡಿದ್ದರು. ಇದೀಗ 12 ವರ್ಷಗಳ ದಾಂಪತ್ಯ ಜೀವನಕ್ಕೆ ಇಶಾ ಡಿಯೋಲ್ ಮತ್ತು ಭರತ್ ತಖ್ತಾನಿ ಅಂತ್ಯ ಹಾಡಿದ್ದಾರೆ.
