LATEST NEWS
ಗೋಹತ್ಯೆ ಮಾಡುವವರಿಗೆ ಬಲೆ ಹಾಕುತ್ತೇವೆ ಬಲಿ ತೆಗೆದುಕೊಳ್ಳುತ್ತೇವೆ- ಕೆ.ಎಸ್ ಈಶ್ವರಪ್ಪ

ಉಡುಪಿ : ಗೋವು ಹಂತಕರಿಗೆ ಭಯ ಹುಟ್ಟಿಸಲು ಗೋಹತ್ಯಾ ನಿಯಂತ್ರಣದ ಕಾನೂನು ಜಾರಿಗೆ ತಂದಿದ್ದೇವೆ. ಜಾರಿಗೆ ತಂದಿರುವ ಕಾನೂನು ಭಯ ಹುಟ್ಟಿಸಲು ಸಮರ್ಥವಾಗಿದೆ. ಅಕ್ರಮ ಮುಂದುವರೆಸಿದರೆ ಅಂಥವರನ್ನು ನಾವು ಬಲಿತಗೆದುಕೊಳ್ಳುತ್ತೇವೆ ಎಂದು ಸಚಿವ ಈಶ್ವರಪ್ಪ ಎಚ್ಚರಿಕೆ ನೀಡಿದ್ದಾರೆ.
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಕೂಳೂರಿನಲ್ಲಿ ಗೋರಕ್ಷಕರ ಮೇಲೆ ವಾಹನ ಹತ್ತಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಗಾಯಾಳುಗಳಿಗೆ ಮಣಿಪಾಲದ ಕೆಎಂಸಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಣಿಪಾಲ ಕೆಎಂಸಿಗೆ ಸಚಿವ ಕೆ.ಎಸ್ ಈಶ್ವರಪ್ಪ ಆಗಮಿಸಿ ದಾಳಿಗೊಳಗಾದವರ ಆರೋಗ್ಯ ವಿಚಾರಿಸಿದ್ದಾರೆ. ಕೆಎಂಸಿ ಆಸ್ಪತ್ರೆಯ ವೈದ್ಯರ ಜೊತೆ ಸಮಾಲೋಚನೆ ನಡೆಸಿದ್ದಾರೆ. ಈ ವೇಳೆ ಸೂಕ್ತ ಚಿಕಿತ್ಸೆ ನೀಡುವಂತೆ ಸಚಿವರು ಸೂಚನೆ ನೀಡಿದ್ದಾರೆ.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸಚಿವನಾಗಿ ನನಗೆ ಪೊಲೀಸ್ ಇಲಾಖೆ ಬಿಗಿ ಕ್ರಮ ಕೈಗೊಳ್ಳದ ಬಗ್ಗೆ ಅಸಮಾಧಾನ ಇದೆ, ಪೊಲೀಸ್ ಇಲಾಖೆಗೆ ತಮ್ಮ ಹೆಂಡ್ತಿ ಮಕ್ಕಳಿಗೆ ಏನಾದರು ಮಾಡಿದ್ರೆ ಏನು ಎಂಬ ಭಯವಿದೆ. ಬಿಜೆಪಿ ಸರ್ಕಾರ ಬಂದರೂ ಗೋಹತ್ಯೆ ನಿಂತಿಲ್ಲ ಇದನ್ನೆಲ್ಲ ನೋಡುವಾಗ ನನಗೆ ಹೊಟ್ಟೆ ಉರಿಯುತ್ತಿದೆ ಪೂರ್ಣ ಗೋಹತ್ಯೆ ನಿಲ್ಲಿಸಲು ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಗೋಹತ್ಯೆ ಮಾಡುವವರಿಗೆ ಬಲೆ ಹಾಕುತ್ತೇವೆ ಬಲಿ ತೆಗೆದುಕೊಳ್ಳುತ್ತೇವೆ ಎಂದ ಅವರು ನಾನು ಹಿಂದೊಂದು ಮುಂದೊಂದು ಇಲ್ಲ ಗೃಹ ಸಚಿವರ ಜೊತೆ ಚರ್ಚಿಸಿ ಎಲ್ಲಾ ಕ್ರಮ ಕೈಗೊಳ್ಳುತ್ತೇವೆ ಎಂದರು.