DAKSHINA KANNADA
ಅತೃಪ್ತರ ಸರಕಾರ ಹೆಚ್ಚು ದಿನ ಅಧಿಕಾರದಲ್ಲಿರಲು ಸಾಧ್ಯವಿಲ್ಲ – ಈಶ್ವರಪ್ಪ

ಅತೃಪ್ತರ ಸರಕಾರ ಹೆಚ್ಚು ದಿನ ಅಧಿಕಾರದಲ್ಲಿರಲು ಸಾಧ್ಯವಿಲ್ಲ – ಈಶ್ವರಪ್ಪ
ಮಂಗಳೂರು ಜೂನ್ 22: ರಾಜ್ಯದ ಸಮ್ಮಿಶ್ರ ಸರಕಾರದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಆಟಕ್ಕುಂಟು ಲೆಕ್ಕಕ್ಕಿಲ್ಲದ ಮುಖ್ಯಮಂತ್ರಿಯಾಗಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.
ಸುಬ್ರಹ್ಮಣ್ಯದ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದ ದೇವರ ದರ್ಶನ ಪಡೆದ ನಂತರ ಮಾತನಾಡಿದ ಈಶ್ವರಪ್ಪ ಇದೊಂದು ಅತೃಪ್ತರು ಸೇರಿ ಮಾಡಿಕೊಂಡು ರಚಿಸಿರುವ ಸರಕಾರವಾಗಿದ್ದು, ಎಲ್ಲರ ನಡುವೆಯೂ ಮುಸುಕಿನ ಗುದ್ದಾಟ ನಡೆಯುತ್ತಿದೆ ಎಂದು ಹೇಳಿದರು. ಒಬ್ಬನ ಇಲಾಖೆಯಲ್ಲಿ , ಮತ್ತೋಬ್ಬರು ಮೂಗು ತೂರಿಸುವ ಕೆಲಸ ನಡೆಯುತ್ತಿದೆ. ಈ ಸರಕಾರ ಹೆಚ್ಚು ಸಮಯ ಅಧಿಕಾರದಲ್ಲಿರುವುದು ಸಾಧ್ಯವಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಭವಿಷ್ಯ ನುಡಿದರು.

ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಹೆಚ್ಚಿನ ಮತಗಳಿಂದ ಜಯಗಳಿಸಿದ ಬಿಜೆಪಿ ಅಧಿಕ ಸೀಟುಗಳನ್ನು ಪಡೆದಿದೆ ಈ ಕಾರಣದಿಂದ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೆ ನರೇಂದ್ರ ಮೋದಿಯೇ ಪ್ರದಾನಿಯಾಗಬೇಕು ಎನ್ನುವ ಪ್ರಾರ್ಥನೆಯೊಂದಿಗೆ ಈಶ್ವರಪ್ಪ ತುಲಾಭಾರ ನಡೆಸಿದ್ದಾರೆ.