LATEST NEWS
ಮಾನಸ ಅಮ್ಯೂಸ್‌ಮೆಂಟ್ ವಾಟರ್ ಪಾರ್ಕ್‌ನ ನಿದೇರ್ಶಕ ಯುಜಿನ್ ವಿಲ್ಫ್ರೆಡ್ ಪಿಂಟೋ ನಿಧನ

ಮಂಗಳೂರು ಜುಲೈ 25: ಪಿಲಿಕುಳದಲ್ಲಿರುವ ಮಾನಸ ಅಮ್ಯೂಸ್‌ಮೆಂಟ್ ವಾಟರ್ ಪಾರ್ಕ್‌ನ ನಿದೇರ್ಶಕರಾದ ಯುಜಿನ್ ವಿಲ್ಫ್ರೆಡ್ ಪಿಂಟೋ ಅವರು ಜುಲೈ 24 ರಂದು ನಿಧನರಾಗಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. 2020 ರಲ್ಲಿ ಮಾನಸ ಅಮ್ಯೂಸ್‌ಮೆಂಟ್ ವಾಟರ್ ಪಾರ್ಕ್‌ನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು GM ಅಮ್ಯೂಸ್‌ಮೆಂಟ್ ಪಾರ್ಕ್ ಸೇರಿದಂತೆ ಹಲವಾರು ರೀತಿಯ ಕಂಪನಿಗಳಲ್ಲಿ ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ಪಿಂಟೊ ಅವರು ಮನೋರಂಜನಾ ಉದ್ಯಮದಲ್ಲಿ ವಿಶಿಷ್ಟವಾದ ವೃತ್ತಿಜೀವನವನ್ನು ಹೊಂದಿದ್ದರು. ಅವರ ನಾಯಕತ್ವದಲ್ಲಿ ಅಮ್ಯೂಸ್‌ಮೆಂಟ್ ಪಾರ್ಕ್ ಅಪಾರ ಜನಪ್ರಿಯತೆಯನ್ನು ಳಿಸಿತು . ಮಂಗಳೂರಿನ ಪ್ರವಾಸೋದ್ಯಮ ಕ್ಷೇತ್ರಕ್ಕೆ ಗಣನೀಯ ಕೊಡುಗೆ ನೀಡಿದ್ದರು..
