Connect with us

KARNATAKA

ಬೆಂಗಳೂರು – ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ ನೀಡಿದ್ದ ಆರೋಪಿ ಕೇರಳದಲ್ಲಿ ಅರೆಸ್ಟ್

ಬೆಂಗಳೂರು ಏಪ್ರಿಲ್ 14: ಬೆಂಗಳೂರಿನಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ ನೀಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಸಂತೋಷ್ ಡೆನಿಯಲ್ ಎಂದು ಗುರುತಿಸಲಾಗಿದೆ. ಈತನನ್ನು ಕೇರಳ ಕೋಝಿಕ್ಕೋರ್​​ ಬಳಿಯ ಗ್ರಾಮದಿಂದ ಬಂಧಿಸಲಾಗಿದೆ.


ಏಪ್ರಿಲ್ 3ರಂದು ಸ್ನೇಹಿತೆ ಜತೆ ಯುವತಿ ನಡೆದುಕೊಂಡು ಬರುತ್ತಿದ್ದಾಗ ಹಿಂದಿನಿಂದ ಬಂದು ಕಿರುಕುಳ ನೀಡಿ ಪರಾರಿಯಾಗಿದ್ದ. ಸಂತ್ರಸ್ತೆಗೂ ಆರೋಪಿಗೂ ಯಾವುದೇ ಪರಿಚಯ ಇರಲಿಲ್ಲ. ಘಟನೆ ಬಳಿಕ ಬೆಂಗಳೂರು ನಗರ ತೊರೆದಿದ್ದ ಆರೋಪಿ ತಲೆಮರೆಸಿಕೊಂಡಿದ್ದ. ಈ ಸಂಬಂಧ ಸ್ಥಳೀಯ ನಿವಾಸಿ ಲೋಕೇಶ್ ಗೌಡ ದೂರು ನೀಡಿದ್ದರು.

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವುದು ಪೊಲೀಸರಿಗೆ ಸವಾಲಾಗಿ ಪರಿಣಮಿಸಿತ್ತು. ಆರೋಪಿಯ ಚಲನವಲನ ಪತ್ತೆಗೆ 1,800ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲಿಸಿದ್ದರು. ಆರೋಪಿ ಪತ್ತೆಗಾಗಿ ಡಿಸಿಪಿ ಸಾರಾ ಫಾತೀಮಾ 2 ತಂಡ ರಚಿಸಿದ್ದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *