LATEST NEWS
ಸಾಮೂಹಿಕ ಅತ್ಯಾಚಾರದ ಆರೋಪ – ಅಂಡಮಾನ್ ಮಾಜಿ ಮುಖ್ಯ ಕಾರ್ಯದರ್ಶಿ ಅರೆಸ್ಟ್
ಪೋರ್ಟ್ ಬ್ಲೇರ್: 21 ವರ್ಷ ವಯಸ್ಸಿನ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಅಂಡಮಾನ್ ಮತ್ತು ನಿಕೋಬಾರ್ ಮಾಜಿ ಮುಖ್ಯ ಕಾರ್ಯದರ್ಶಿ ಜಿತೇಂದ್ರ ನರೇನ್ ಅವರನ್ನು ಬಂಧಿಸಲಾಗಿದೆ. ಅವರಿಗೆ ಪೋರ್ಟ್ ಬ್ಲೇರ್‌ನಲ್ಲಿ ಸಮನ್ಸ್ ನೀಡಿದ ಬಳಿಕ ವಿಚಾರಣೆಗೆ ಹಾಜರಾಗಿದ್ದರು ಹಾಗೂ ತನಿಖೆಗೆ ಒಳಗಾಗಿದ್ದರು.
ಜಿತೇಂದ್ರ ನರೇನ್ ಅವರು ಕಾರ್ಯದರ್ಶಿಯಾಗಿದ್ದಾಗ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾಗಿ ಆರೋಪಿಸಲಾಗಿದೆ. ಈ ಬಗ್ಗೆ ಅಂಡಮಾನ್ ಮತ್ತು ನಿಕೋಬಾರ್ ಪೊಲೀಸರಿಂದ ವರದಿಯನ್ನು ಸ್ವೀಕರಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ನರೇನ್ ಹಾಗೂ ಇನ್ನೊಬ್ಬ ಅಧಿಕಾರಿ ಆರ್.ಎಲ್ ರಿಷಿ ತಮ್ಮ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವುದಾಗಿ 21 ವರ್ಷದ ಮಹಿಳೆಯೊಬ್ಬರು ಆರೋಪಿಸಿದ್ದಾರೆ. ಈ ಆರೋಪದ ಹಿನ್ನೆಲೆ ಕಳೆದ ತಿಂಗಳು ಜಿತೇಂದ್ರ ನರೇನ್ ಅವರನ್ನು ಕೇಂದ್ರ ಸರ್ಕಾರ ಅಮಾನತುಗೊಳಿಸಿತ್ತು.