Connect with us

LATEST NEWS

ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ವಿಧಿವಶ: ಪ್ರಧಾನಿ ಸಂತಾಪ

ನವದೆಹಲಿ ಸೆಪ್ಟೆಂಬರ್ 27: ದೇಶ 2020ರಲ್ಲಿ ಹಲವು ದುರೀಣರನ್ನು ಕಳೆದುಕೊಳ್ಳುತ್ತಿದ್ದು, ಇಂದು ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಅವರನ್ನು ಕಳೆದುಕೊಂಡಿದೆ. ಜಸ್ವಂತ್‌ ಸಿಂಗ್‌ ಅವರನ್ನು ಜೂನ್ 25 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರಿಗೆ, ತಲೆಯಲ್ಲಿನ ಗಾಯವು ತೀವ್ರ ಸ್ವರೂಪ ಪಡೆದಿತ್ತು. ಈ ಮಧ್ಯೆ ಇಂದು ಬೆಳಿಗ್ಗೆ ಅವರಿಗೆ ಹೃದಯ ಸ್ತಂಭನವಾಗಿ ಕೊನೆಯುಸಿರೆಳೆದರು ಎಂದು ದೆಹಲಿಯ ಸೇನಾ ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.


ಅವರಿಗೆ 82 ವರ್ಷ ವಯಸ್ಸಾಗಿತ್ತು. ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿ ಸರಣಿ ಟ್ವೀಟ್ ಮಾಡಿದ್ದು, ಅವರ ಕೊಡುಗೆಯನ್ನು ಸ್ಮರಿಸಿಕೊಂಡಿದ್ದಾರೆ. ಜಸ್ವಂತ್ ಸಿಂಗ್ ಜಿ ಅವರು ಶ್ರದ್ಧೆಯಿಂದ ನಮ್ಮ ದೇಶಸೇವೆ ಮಾಡಿದ್ದಾರೆ. ಆರಂಭದಲ್ಲಿ ಸೈನಿಕರಾಗಿ ನಂತರದಲ್ಲಿ ರಾಜಕಾರಣದ ಮೂಲಕ ಸೇವೆ ಸಲ್ಲಿಸಿದ್ದಾರೆ.

ಅಟಲ್​ಜಿ ಅವರ ಸರ್ಕಾರ ಇದ್ದಾಗ, ಅವರು ಮಹತ್ವದ ಖಾತೆಗಳನ್ನು ನಿಭಾಯಿಸಿದ್ದರು. ಆರ್ಥಿಕ, ರಕ್ಷಣಾ ಮತ್ತು ವಿದೇಶ ವ್ಯವಹಾರ ಕ್ಷೇತ್ರದಲ್ಲಿ ಅಚ್ಚಳಿಯದ ಹೆಜ್ಜೆಗುರುತನ್ನು ಅವರು ಬಿಟ್ಟುಹೋಗಿದ್ದಾರೆ. ಅವರ ನಿಧನ ದುಃಖವನ್ನು ಉಂಟುಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಮೊದಲ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

Facebook Comments

comments