Connect with us

    DAKSHINA KANNADA

    ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ರೂ.2 ಕೋಟಿಗೂ ಅಧಿಕ ವಂಚನೆ, ಶಾಲಾ ಶಿಕ್ಷಕಿ ಸಚಿತಾ ರೈ ಬಂಧನ..!

    ಕಾಸರಗೋಡು : ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ರೂ.2 ಕೋಟಿಗೂ ಅಧಿಕ ವಂಚನೆ ನಡೆಸಿದ್ದ  ಶಾಲಾ ಶಿಕ್ಷಕಿ, ಮಾಜಿ DYFI ನಾಯಕಿ ಸಚಿತಾ ರೈ ಅವರನ್ಜು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ.

    ಸಚಿತಾ  12ಕ್ಕೂ ಹೆಚ್ಚು ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದು 2 ಕೋಟಿಗೂ ಅಧಿಕ ಹಣ ಸಂಗ್ರಹ ಮಾಡಿದ್ದ ಆರೋಪದಲ್ಲಿ ವಿದ್ಯಾನಗರ ಪೊಲೀಸರು ಗುರುವಾರ ಸಂಜೆ ವಶಕ್ಕೆ ಪಡೆದಿದ್ದಾರೆ. ಆಕೆಯ ವಿರುದ್ಧ ಉಪ್ಪಿನಂಗಡಿ, ಬದಿಯಡ್ಕ, ಕುಂಬಳೆ, ಮಂಜೇಶ್ವರ, ಕಾಸರಗೋಡು, ಆದೂರು, ಮೇಲ್ಪರಂಬ ಪೊಲೀಸ್ ಠಾಣೆಗಳಲ್ಲಿ ದೂರುಗಳು ದಾಖಲಾಗಿದೆ.  ಕೆಲ ದಿನಗಳಿಂದ ಸಚಿತಾ ರೈ ತಲೆಮರೆಸಿಕೊಂಡಿದ್ದರು.ಗುರುವಾರ ಸಂಜೆ ನ್ಯಾಯಾಲಯಕ್ಕೆ ಶರಣಾಗಲು ಆಗಮಿಸಿದಾಗ ಆಕೆಯನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ.ಸಿಪಿಸಿಆರ್‌ಐ (ಸೆಂಟ್ರಲ್‌ ಪ್ಲಾಂಟೇಶನ್‌ ಕ್ರಾಪ್ಸ್‌ ರಿಸರ್ಚ್‌ ಇನ್‌ಸ್ಟಿಟ್ಯೂಟ್‌), ಕೇಂದ್ರೀಯ ವಿದ್ಯಾಲಯ, ಕರ್ನಾಟಕ ಅಬಕಾರಿ ಇಲಾಖೆ, ಅರಣ್ಯ ಇಲಾಖೆ, ಎಸ್‌ಬಿಐ ಮುಂತಾದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿ ವ್ಯಕ್ತಿಗಳಿಂದ ಲಕ್ಷ ಲಕ್ಷ ರೂಪಾಯಿಗಳನ್ನು ಸಚಿತಾ ಸಂಗ್ರಹಿಸಿದ್ದರು. ಕುಂಬಳೆ ಕಿದೂರಿನ ನಿಶ್ಮಿತಾ ಶೆಟ್ಟಿ ಎಂಬವರು ಮೊದಲ ದೂರು ದಾಖಲಿಸಿದ್ದು, ಸಚಿತಾ ವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ.ಇದರ ಬೆನ್ನಲ್ಲೇ ಇತರ ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ. ಸಿಪಿಸಿಆರ್‌ಐನಲ್ಲಿ ಕೆಲಸ ಕೊಡಿಸುವುದಾಗಿ ಸಚಿತಾ ನಿಶ್ಮಿತಾ ಶೆಟ್ಟಿಗೆ ಸುಮಾರು 15 ಲಕ್ಷ ರೂಪಾಯಿ ವಂಚಿಸಿದ್ದಾರೆ. ಅಲ್ಲದೆ ಕೇಂದ್ರೀಯ ವಿದ್ಯಾಲಯದಲ್ಲಿ ಕೆಲಸ ಕೊಡಿಸುವುದಾಗಿ ದೇಲಂಪಾಡಿಯ ಸುಚಿತ್ರಾ ರಾವ್ ಎಂಬುವವರಿಂದ 7,31,500 ರೂ. ವಂಚಿಸಿದ್ದಾರೆ.ಪೊಲೀಸರು ತನಿಖೆ ಮುಂದುವರೆಸಿದ್ದು, ಇನ್ನಷ್ಟು ವಂಚನೆ ಪ್ರಕರಣಗಳು ಬೆಳಕಿಗೆ ಬರುವ ಸಾಧ್ಯತೆ ಇದೆ. ಪೊಲೀಸ್ ಮೂಲಗಳ ಪ್ರಕಾರ, ಸಚಿತಾ ರೈ ಡಿವೈಎಫ್‌ಐ ಜಿಲ್ಲಾ ಸಮಿತಿಯ ಮಾಜಿ ಸದಸ್ಯೆಯಾಗಿದ್ದು, ಬಾದೂರಿನ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply