Connect with us

  FILM

  ಮಾಜಿ ಐಎಎಸ್ ಅಧಿಕಾರಿ ಬಾನಲ್ಲೆ ಮಧುಚಂದ್ರಿಕೆ ನಟ ಕೆ ಶಿವರಾಮ್ ಹೃದಯಾಘಾತದಿಂದ ನಿಧನ

  ಬೆಂಗಳೂರು ಫೆಬ್ರವರಿ 29: ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆದು ಐಎಎಸ್ ಅಧಿಕಾರಿಯಾಗಿದ್ದ ನಟ ಕೆ. ಶಿವರಾಮ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶಿವರಾಂ ಅವರಿಗೆ ಬುಧವಾರ ಹೃದಯಾಘಾತವಾಗಿತ್ತು. ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೆ, ಗುರುವಾರ ಬೆಳಗ್ಗೆ ಮೃತಪಟ್ಟಿದ್ದಾರೆ.


  ರಾಮನಗರ ಜಿಲ್ಲೆಯ ಬಿಡದಿ ಬಳಿಯ ಹಳ್ಳಿಯಲ್ಲಿ 1953ರಲ್ಲಿ ಜನಿಸಿದ್ದ ಶಿವರಾಮು, 1985ರಲ್ಲಿ ಕೆಎಎಸ್‌ ಅಧಿಕಾರಿಯಾಗಿ ಆಯ್ಕೆಯಾಗಿದ್ದರು. ಬಳಿಕ, ಕನ್ನಡದಲ್ಲಿಯೇ ಐಎಎಸ್‌ ಪರೀಕ್ಷೆ ಬರೆದು, ಐಎಎಸ್‌ ಅಧಿಕಾರಿಯೂ ಆಗಿದ್ದರು. ಆ ಮೂಲಕ, ಕನ್ನಡದಲ್ಲಿ ಐಎಎಸ್‌ ಬರೆದು, ಅಧಿಕಾರಿಯಾದ ಮೊದಲ ಕನ್ನಡಿಗ ಎಂಬ ಹೆಗ್ಗಳಿಕೆಗೂ ಭಾಜನರಾಗಿದ್ದಾರು. ಕೆ.ಶಿವರಾಮ್ ಅವರು ರಾಜ್ಯದ ಹಲವು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.

  1993ರಲ್ಲಿ ಸಿನಿರಂಗಕ್ಕೆ ಎಂಟ್ರಿ ಕೊಟ್ಟಿದ್ದ ಶಿವರಾಮು ಅವರು, ನಾಗತಿಹಳ್ಳಿ ನಿರ್ದೇಶನದ ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾದಲ್ಲಿ ನಾಯಕ ನಟನಾಗಿ ನಟಿಸಿದ್ದರು. ವಸಂತ ಕಾವ್ಯ, ಖಳನಾಯಕ, ಸಾಂಗ್ಲಿಯಾನ-3, ಪ್ರತಿಭಟನೆ, ಯಾರಿಗೆ ಬೇಡ ದುಡ್ಡು, ಗೇಮ್ ಫಾರ್ ಲವ್ ಹಾಗೂ ಟೈಗರ್ ಸಿನಿಮಾಗಳಲ್ಲಿ ನಟಿಸಿದ್ದರು.

  Share Information
  Advertisement
  Click to comment

  You must be logged in to post a comment Login

  Leave a Reply