Connect with us

LATEST NEWS

ಕಾಂಗ್ರೇಸ್ ಪಕ್ಷ ಸೇರಲಿರುವ ದಕ್ಷಿಣಕನ್ನಡ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್

ಚೆನ್ನೈ : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿರುವ ಸಂದರ್ಭದಲ್ಲೇ ಐಎಎಸ್ ಗೆ ರಾಜೀನಾಮೆ ನೀಡಿ ಹೊರ ಬಂದ ಮಾಜಿ ಐಎಎಸ್ ಅಧಿಕಾರಿ ಸಂಸಿಕಾಂತ್ ಸಂಥಿಲ್ ಸೋಮವಾರ ತಮಿಳುನಾಡಿನಲ್ಲಿ ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

2009ರ ಬ್ಯಾಚ್ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಕಳೆದ ವರ್ಷ ಸೆಪ್ಟೆಂಬರಿನಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ಜೊತೆಗೆ ಕೇಂದ್ರ ಸರ್ಕಾರದ ನೀತಿಗಳು ನನಗೆ ಇಷ್ಟವಾಗುತ್ತಿಲ್ಲ. ಕೇಂದ್ರ ಸರ್ಕಾರದ ಪಾಲಿಸಿಗಳು ಸೈದ್ಧಾಂತಿಕವಾಗಿ ನನಗೆ ಒಪ್ಪಿಗೆ ಇಲ್ಲವೆಂದು ಕಾರಣ ಹೇಳಿ ರಾಜೀನಾಮೆ ನೀಡಿದ್ದರು.
ರಾಜೀನಾಮೆ ನೀಡಿದ ಬಳಿಕ ಮೌನವಾಗಿದ್ದ ಸೆಂಥಿಲ್ ಇಂದು ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವುದಾಗಿ ಹೇಳಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ದೇಶದಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಮತ್ತು ಕೇಂದ್ರ ಸರ್ಕಾರದ ನೀತಿ ಬೇಸತ್ತು ನಾನು ರಾಜೀನಾಮೆ ನೀಡಿದ್ದೆ. ಈಗ ನಾನು ರಾಜಕೀಯಕ್ಕೆ ಬರುವುದಕ್ಕೆ ಒಳ್ಳೆಯ ಸಮಯ ಕೂಡಿ ಬಂದಿದೆ. ನನ್ನ ರಾಜಕೀಯ ಭವಿಷ್ಯಕ್ಕೆ ಕಾಂಗ್ರೆಸ್ ಉತ್ತಮ ವೇದಿಕೆಯಾಗಿದೆ ಎಂದು ಹೇಳಿದ್ದಾರೆ.