Connect with us

    DAKSHINA KANNADA

    ಧ್ವಜಾರೋಹಣದ ವೇಳೆ ಕುಸಿದು ಬಿದ್ದು ನಿವೃತ್ತ ಸೈನಿಕ ಮೃತ್ಯು….!!

    ಕಡಬ ಅಗಸ್ಟ್ 15: ಸ್ವಾತಂತ್ರ್ಯ ದಿನಾಚರಣೆ ಸಂದರ್ಭ ಧ್ವಜಾರೋಹಣದ ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕರೊಬ್ಬರು ಕುಸಿದು ಬಿದ್ದು ಸಾವನಪ್ಪಿರುವ ಘಟನೆ ಕುಟ್ರುಪಾಡಿ ಗ್ರಾ.ಪಂ. ವತಿಯಿಂದ ಹಳೆಸ್ಟೇಷನ್ ಅಮೃತ ಸರೋವರದ ಬಳಿ ನಡೆದಿದೆ.

    ಮೃತರನ್ನು ನಿವೃತ್ತ ಸೈನಿಕ ಗಂಗಾಧರ ಗೌಡ ಎಂದು ಗುರುತಿಸಲಾಗಿದೆ. ಹೊಸಮಠ ಸಿ.ಎ.ಬ್ಯಾಂಕಿನ ಮಾಜಿ ಅಧ್ಯಕ್ಷ ಎನ್. ಕರುಣಾಕರ ಗೋಗಟೆ ಧ್ವಜಾರೋಹಣ ಮಾಡಲು ಸಿದ್ದತೆ ಮಾಡುತ್ತಿದ್ದಾಗ ಅವರಿಗೆ ನಿವೃತ್ತ ಸೈನಿಕ ಗಂಗಾಧರ ಗೌಡ ಅವರು ದ್ವಜ ವಂದನೆಯ ಮಾಹಿತಿ ನೀಡಿ ಧ್ವಜಾರೋಹಣಕ್ಕೆ ಸಿದ್ದವಾಗುತ್ತಿದ್ದ ವೇಳೆ ಗಂಗಾಧರ ಗೌಡ ಕುಸಿದು ಬಿದ್ದು ಅಸ್ವಸ್ಥಗೊಂಡರು. ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ವೇಳೆ ದಾರಿ ಮದ್ಯದಲ್ಲಿ ಮೃತಪಟ್ಟಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply