ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ ನಿಧನ

ಮಂಗಳೂರು,ಜನವರಿ 27: ಅನಾರೋಗ್ಯದ ನಿಮಿತ್ತ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಮಾಜಿ ಸಚಿವ, ಜೆಡಿಎಸ್ ಮುಖಂಡ ಕೆ. ಅಮರನಾಥ ಶೆಟ್ಟಿ ಇಂದು ನಿಧನರಾಗಿದ್ದಾರೆ.

80 ವರ್ಷ ವಯಸ್ಸಿನ ಅಮರನಾಥ ಶೆಟ್ಟಿಯವರ ಆರೋಗ್ಯ ಇತ್ತೀಚಿನ ಕೆಲವು ದಿನಗಳಲ್ಲಿ ಹದಗೆಟ್ಟ ಹಿನ್ನಲೆಯಲ್ಲಿ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇಂದು ಮುಂಜಾನೆ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಮೂಡಬಿದಿರೆ ಶಾಸಕರಾಗಿ ಆಯ್ಕೆಯಾಗಿದ್ದು ಕೆ. ಅಮರನಾಥ ಶೆಟ್ಟಿ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು.

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ಕಟ್ಟಿ ಬೆಳೆಸಿದ ಕೀರ್ತಿ ಕೆ. ಅಮರನಾಥ ಶೆಟ್ಟಿಯವರಿಗೆ ಸಲ್ಲುತ್ತದೆ.

ಅವರ ನಿಧನಕ್ಕೆ ರಾಜ್ಯ ಹಾಗೂ ಜಿಲ್ಲೆಯ ನಾಯಕರು ಸಂತಾಪ ಸೂಚಿಸಿದ್ದಾರೆ.

Facebook Comments

comments