LATEST NEWS
ಜೆಡಿಎಸ್ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್

ಜೆಡಿಎಸ್ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್
ಉಡುಪಿ ಸೆಪ್ಟೆಂಬರ್ 3: ಮಾಜಿ ಸಚಿವ ಪ್ರಮೋದ್ಮಧ್ವರಾಜ್ ತಮ್ಮ ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದ ಹಿನ್ನಲೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.
ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಹಾಗೂ ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಜೆಡಿಎಸ್ ನಿಂದ ಕಣಕ್ಕಿಳಿದಿದ್ದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಕಳೆದ ಶನಿವಾರ ಮಾಜಿ ಕೇಂದ್ರ ಸಚಿವ ಎಂ. ವೀರಪ್ಪ ಮೊಯಿಲಿ ಅವರು ಪ್ರಮೋದ್ ಜೆಡಿಎಸ್ ನಲ್ಲಿದ್ದಾರೆ. ಅರ್ಜಿ ಹಾಕಿದರೆ ಮತ್ತೆ ಕಾಂಗ್ರೆಸ್ಸಿಗೆ ಬರಬಹುದು ಎಂದು ಹೇಳಿಕೆ ನೀಡಿದ್ದರು.
ಈ ವಿಚಾರದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸದಾಶಿವ್ ಅಮೀನ್ ಅವರು ಹರ್ಷ ಮೊಯ್ಲಿ ನಡುವೆ ಕಿತ್ತಾಟಕ್ಕೆ ಕಾರಣವಾಗಿತ್ತು. ಅಲ್ಲದೆ ಪ್ರಮೋದ್ಮಧ್ವರಾಜ್ ಅವರು ಸದ್ಯ ಯಾವ ಪಕ್ಷದಲ್ಲಿದ್ದಾರೆ ಎನ್ನುವುದರ ಬಗ್ಗೆ ಕಾಂಗ್ರೇಸ್ ಕಾರ್ಯಕರ್ತರಲ್ಲಿ ಗೊಂದಲವುಂಟಾಗಿತ್ತು.
ಈ ಹಿನ್ನಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಬರೆದಿದ್ದು, ಮೈತ್ರಿ ಸರಕಾರದ ಹಿನ್ನಲೆಯಲ್ಲಿ ಜೆಡಿಎಸ್ ಪಕ್ಷದಿಂದ ಲೋಕಸಭಾ ಚುನಾವಣೆ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸಿದ್ದು, ಈಗ ಮೈತ್ರಿ ಸರಕಾರ ಅಸ್ತಿತ್ವದಲ್ಲಿ ಇಲ್ಲದೆ ಇರುವುದರಿಂದ ನಾನು ತಾಂತ್ರಿಕ ಕಾರಣಗಳಿಂದ ಹೊಂದಿದ್ದ ಜೆಡಿಎಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಪ್ರಮೋದ್ ಮಧ್ವರಾಜ್ ಅವರ ಜೆಡಿಎಸ್ ರಾಜೀನಾಮೆಗೆ ಕಳೆದ ಶನಿವಾರ ನಡೆದ ಹರ್ಷ ಮೊಯಿಲಿ ಹಾಗೂ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸದಾಶಿವ್ ಅಮೀನ್ ನಡುವೆ ನಡೆದ ಕಿತ್ತಾಟ ಕಾರಣವಾಗಿದೆ. ಜೆಡಿಎಸ್ ರಾಜಿನಾಮೆ ನೀಡಿರುವ ಪ್ರಮೋದ್ಮಧ್ವರಾಜ್ ಮತ್ತೆ ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆ.