ಮುಂಬರುವ ಲೋಕಸಭಾ ಚುನಾವಣೆಯ ಮೇಲೆ ಕಣ್ಣು : ಕುಕ್ಕೆಗೆ ಭೇಟಿ ನೀಡಿದ ಶ್ರೀರಾಮುಲು

ಪುತ್ತೂರು, ಫೆಬ್ರವರಿ 02 : ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಬಿ. ಶ್ರೀರಾಮುಲು ಇಂದು ಇತಿಹಾಸ ಪ್ರಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಸ್ಥಳೀಯ ಬಿಜೆಪಿ ಮುಖಂಡರೊಂದಿಗೆ ಕುಕ್ಕೆಗೆ ಆಗಮಿಸಿದ ಅವರು ಆಶ್ಲೇಷ ಬಲಿ, ಮಹಾಭಿಷೇಕ ಸೇವೆ ನೆರವೇರಿಸಿದರು.

ಮಧ್ಯಾಹ್ನ ಮಹಾಪೂಜೆಯ ಬಳಿಕ ನಾಗಪ್ರತಿಷ್ಠೆ ಸೇವೆಯಲ್ಲೂ ಪಾಲ್ಗೊಂಡಿದ್ದಾರೆ.

ಈ ಸಂದರ್ಭದಲ್ಲಿ ಶ್ರೀರಾಮುಲು ಗೆ ಸ್ಥಳೀಯ ಬಿಜೆಪಿ ಮುಖಂಡರು ಸಾಥ್ ನೀಡಿದ್ದಾರೆ.

ಮುಂಬರುವ ಲೋಕಾ ಸಭಾ ಚುನಾವಣೆಯಲ್ಲಿ ಬಳ್ಳಾರಿಯಿಂದ ಶ್ರೀ ರಾಮುಲು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಅದಕ್ಕಿರುವ ಅಡೆ-ತಡೆಗಳನ್ನು ನಿವಾರಿಸಲು ಕುಕ್ಕೆಗೆ ಭೇಟಿ ನೀಡಿರುವ ಸಾಧ್ಯತೆಗಳಿವೆ.

Facebook Comments

comments