Connect with us

    LATEST NEWS

    ವಿಧಾನ ಪರಿಷತ್ ಚುನಾವಣೆ – ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ – ರಘುಪತಿ ಭಟ್ ಘೋಷಣೆ

    ಉಡುಪಿ ಮೇ 13: ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ತನ್ನ ಪಟ್ಟಿ ಬಿಡುಗಡೆ ಮಾಡಿದ ಬೆನ್ನಲ್ಲೇ ಬಂಡಾಯದ ಬಿಸಿ ಎದ್ದಿದ್ದು, ಬಿಜೆಪಿ ಭದ್ರಕೊಟೆ ಉಡುಪಿ ಜಿಲ್ಲೆಯಲ್ಲೇ ಮಾಜಿ ಶಾಸಕ ರಘುಪತಿ ಭಟ್ ಪಕ್ಷೇತರರಾಗಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ.


    ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಘುಪತಿ ಭಟ್ ಅವರು, ಬಿಜೆಪಿ ಕಾರ್ಯಕರ್ತರ ಪ್ರತಿನಿಧಿಯಾಗಿ ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾನು ಸ್ಪರ್ಧೆ ಮಾಡುತ್ತೇನೆ ಎಂದು ಘೋಷಣೆ ಮಾಡಿದರು.
    ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿಯೂ ಬಿಜೆಪಿ ಉಡುಪಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಭಟ್ ರಿಗೆ ಮಿಸ್ ಆಗಿತ್ತು, ಈ ವೇಳೆ ಪಕ್ಷದ ವರಿಷ್ಠರು ವಿಧಾನ ಪರಿಷತ್ ನಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಇದೀಗ ಪರಿಷತ್ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಟಿಕೆಟ್ ನಿರೀಕ್ಷೆಯಲ್ಲಿದ್ದ ರಘುಪತಿ ಭಟ್ ಅವರಿಗೆ ಕಡೆ ಕ್ಷಣದಲ್ಲಿ ಪಕ್ಷವು ಕೈಕೊಟ್ಟಿದೆ. ಶಿವಮೊಗ್ಗದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಮೂಲಕ ಭಟ್ ಆಸೆಗೆ ತಣ್ಣೀರೆರಚಿದೆ. ಪಕ್ಷದ ನಿರ್ಧಾರದಿಂದ ತೀವ್ರ ಅಸಮಾಧಾನಗೊಂಡಿರುವ ಭಟ್ ಅವರು ಸುದ್ದಿಗೋಷ್ಠಿ ನಡೆಸಿ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply