Connect with us

    DAKSHINA KANNADA

    ವಿಧ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿಯಾಗಿದ್ದ ಕಡಬ ಕಾಲೇಜಿಗೆ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಭೇಟಿ

    ಪುತ್ತೂರು ಮಾರ್ಚ್ 07 : ಮೂವರು ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿಯೊಬ್ಬ ಆಸಿಡ್ ದಾಳಿ ನಡೆಸಿದ ಕಡಬ ಸರಕಾರಿ ಪದವಿಪೂರ್ವ ಕಾಲೇಜಿಗೆ ಪುತ್ತೂರಿನ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಭೇಟಿ ನೀಡಿದರು.


    ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿರುವ ಕಾರಣ ಮಧ್ಯಾಹ್ನ ಪರೀಕ್ಷೆ  ಮುಗಿದ ಬಳಿಕ ಕಾಲೇಜಿಗೆ ಭೇಟಿ ನೀಡಿದ ಶಕುಂತಳಾ ಶೆಟ್ಟಿ, ವಿದ್ಯಾರ್ಥಿನಿಯರ ಜತೆ ಸಮಾಲೋಚನೆ ನಡೆಸಿದರು. ಆಸಿಡ್ ದಾಳಿಯ ದಿನ ನಡೆದ ಘಟನಾವಳಿಗಳ ಬಗ್ಗೆ ವಿದ್ಯಾರ್ಥಿನಿಯರು ಮಾಜಿ ಶಾಸಕಿಯವರಿಗೆ ವಿವರಿಸಿದರು. ಸರಕಾರ ಮತ್ತು ಇಡೀ ಆಡಳಿತ ವ್ಯವಸ್ಥೆ ನಿಮ್ಮ ಜತೆಗಿದೆ. ನೀವು ಯಾವುದೇ ಕಾರಣಕ್ಕೆ ದೃತಿಗೆಡಬೇಡಿ. ಆರೋಪಿಗೆ ಕಠಿಣ ಶಿಕ್ಷೆಯಾಗಲಿದೆ. ಸರಕಾರಿ ಕಾಲೇಜಿನಲ್ಲಿ ಭದ್ರತೆಯಿಲ್ಲ ಎಂಬ ಭಾವನೆ ಬೇಡ. ಎಲ್ಲ ರೀತಿಯ ಸುರಕ್ಷತೆ ಒದಗಿಸಲಾಗುವುದು. ಆದರೂ ಕೆಲವೊಂದು ವಿಚಾರಗಳಲ್ಲಿ ವಿದ್ಯಾರ್ಥಿನಿಯರು ಬಹಳ ಎಚ್ಚರಿಕೆಯಿಂದ ಇರಬೇಕು ಎಂದವರು ಹೇಳಿದರು. ಆಸಿಡ್ ಎರಚಿದ ದುಷ್ಕರ್ಮಿಯನ್ನು ತಕ್ಷಣ ಹಿಡಿದು ತಪ್ಪಿಸಿಕೊಳ್ಳದಂತೆ ನೋಡಿಕೊಂಡ ಕಾಲೇಜಿನ ವಿದ್ಯಾರ್ಥಿಗಳ ಸಾಹಸವನ್ನು ಅವರು ಕೊಂಡಾಡಿದರು.


    ಕಡಬ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ 170 ವಿದ್ಯಾರ್ಥಿನಿಯರಿದ್ದಾರೆ. ಇಷ್ಟ ಹೆಣ್ಮಕ್ಕಳಿಗೆ ಕೇವಲ ಒಂದು ಶೌಚಾಲಯವಿರುವುದರಿಂದ ಬಹಳಷ್ಟು ಸಮಸ್ಯೆಯಾಗುತ್ತಿದೆ. ಹೆಚ್ಚುವರಿ ಶೌಚಾಲಯದ ವ್ಯವಸ್ಥೆ ಮಾಡಿಕೊಡಬೇಕೆಂದು ವಿದ್ಯಾರ್ಥಿನಿಯರು ಮನವಿ ಮಾಡಿದರು. ಈ ಬಗ್ಗೆ ಸರಕಾರದ ಗಮನ ಸೆಳೆದು ವ್ಯವಸ್ಥೆ ಮಾಡುವುದಾಗಿ ಶಕುಂತಳಾ ಶೆಟ್ಟಿ ಭರವಸೆ ನೀಡಿದರು. ಕಾಲೇಜಿನ ಆವರಣಗೋಡೆ ಇಲ್ಲದಿರುವ ಬಗ್ಗೆಯೂ ವಿದ್ಯಾರ್ಥಿಗಳು ಗಮನ ಸೆಳೆದರು.

    Share Information
    Advertisement
    Click to comment

    Leave a Reply

    Your email address will not be published. Required fields are marked *